ಚಳ್ಳಕೆರೆ : ನಗರದ ಎ.ಪಿ.ಎಂ.ಸಿ.ಯಲ್ಲಿ ನಡೆದ ತೊಗರಿ ಬೇಳೆ ಖರೀದಿ ಕೇಂದ್ರದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಪಾಲ್ಗೊಂಡು ಖರೀದಿ ಕೇಂದ್ರಕ್ಕೆ ಚಾಲನೆ ನೀಡಿದರು.
ಕೇಂದ್ರ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ 2024-25ನೆ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿ ಕೇಂದ್ರದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಖರೀದಿ ಕೇಂದ್ರಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಧಿಕಾರಿಗಳಾದ ಗಿರೀಶ್, ನಗರಸಭೆ ಉಪಾಧ್ಯಕ್ಷರಾದ ಶ್ರೀಮತಿ ಸುಮಾ ಭರಮಯ್ಯ, ಸದಸ್ಯರಾದ ರಮೇಶ್ ಗೌಡ, ರಾಘವೇಂದ್ರ, ತಾಲ್ಲೂಕು ಮಟ್ಟದ ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ನಗರಸಭೆ ನಾಮ ನಿರ್ದೇಶನ ಸದಸ್ಯರಾದ ಬಡಗಿ ಪಾಪಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಕುಶಲ ಕರ್ಮಿಗಳ ವಿಭಾಗದ ರಾಜ್ಯಾಧ್ಯಕ್ಷರಾದ ಆರ್ ಪ್ರಸನ್ನಕುಮಾರ್, ಮುಖಂಡರುಗಳಾದ ಪ್ರಹ್ಲಾದ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

