ಚಳ್ಳಕೆರೆ : ಕೇಂದ್ರ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ, ತನಿಖಾ ಸಂಸ್ಥೆಗಳ ದುರ್ಬಳಕೆ, ಇ.ಡಿ ಮೂಲಕ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿರುವುದನ್ನು ಖಂಡಿಸಿ ಬೆಂಗಳೂರಿನ ಇ.ಡಿ ಕಚೇರಿ ಬಳಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ರಘಮೂರ್ತಿ ರವರು ಭಾಗವಹಿಸಿದರು.
ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಧಾನಸಭೆ ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಬಿಕೆ ಹರಿಪ್ರಸಾದ್ ಸೇರಿದಂತೆ ಮಾಜಿ ಸಚಿವರುಗಳು, ಶಾಸಕ ಮಿತ್ರರು ಸೇರಿದಂತೆ ಹಲವು ಮುಖಂಡರು, ಸಹಸ್ರಾರು ಕಾರ್ಯಕರ್ತರು ಭಾಗವಹಿಸಿದ್ದರು.