ಚಳ್ಳಕೆರೆ :
ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಸುಮಾರು 10.00ಲಕ್ಷ ರೂಗಳ ವೆಚ್ಚದಲ್ಲಿ ಚಳ್ಳಕೆರೆ ತಾಲ್ಲೂಕಿನ ಬುಡ್ನಹಟ್ಟಿ ಗ್ರಾಮದಲ್ಲಿ ನೂತನ ಪಿರಲು ದೇವರ ದೇವಸ್ಥಾನದ ಕಟ್ಟಡ ನಿರ್ಮಾಣ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಪಾಲ್ಗೊಂಡು ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ ಎಸ್ ನವೀನ್ ರವರು, ನಿರ್ಮಿತಿ ಕೇಂದ್ರದ ಇಂಜಿನಿಯರ್ ಸಿದ್ದೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ನಗರಸಭೆ ಸದಸ್ಯರಾದ ರಮೇಶ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ತಾಲ್ಲೂಕು ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ಮುಖಂಡರುಗಳಾದ ಕಳ್ಳಿ ನಿಂಗಯ್ಯ, ಬೋರಯ್ಯ, ಶ್ರೀನಿವಾಸ್, ತಿಪ್ಪೇಸ್ವಾಮಿ, ಸುಮಲತಾ, ದೊಡ್ಡರಂಗಪ, ಜಗದೀಶ್ ನಾಯ್ಕ, ಕೃಷ್ಣ ನಾಯ್ಕ, ತಿಪ್ಪೇಸ್ವಾಮಿ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

