ಚಳ್ಳಕೆರೆ : ನಾಯಕನಹಟ್ಟಿ ಪಟ್ಟಣದ ನಾಡಕಚೇರಿಗೆ ನೂತನವಾಗಿ ಉಪತಹಶೀಲ್ದಾರ್ ಎಂ ಸುಧಾ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಈ ಹಿಂದೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಹೋಬಳಿಯಲ್ಲಿ ಉಪತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದು ಸರ್ಕಾರದ ಆದೇಶದಂತೆ ಇಂದು ಕಾಯಕಯೋಗಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪುಣ್ಯಕ್ಷೇತ್ರವಾದ ನಾಯಕನಹಟ್ಟಿಯ ನಾಡಕಚೇರಿಯಲ್ಲಿ ಅಧಿಕಾರ ಸ್ವೀಕರಿಸಲಾಗಿದೆ ಎಂದು ಹೇಳಿದರು.
ಇದೇ ವೇಳೆ ಮಾತನಾಡಿದ ಅವರು ಯಾವುದೇ ಒಬ್ಬ ಅಧಿಕಾರಿ ಕಾರ್ಯನಿರ್ವಹಿಸಲು ಸಾರ್ವಜನಿಕರ ಸಹಕಾರ ಅತಿಮುಖ್ಯವಾದದ್ದು ಹೋಬಳಿಯ ರೈತರು ಸಾರ್ವಜನಿಕರು ಇಲಾಖೆಯೊಂದಿಗೆ ಸಹಕಾರ ನೀಡಿದಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳ ಆದ ಗೌಡಗೆರೆ ಗ್ರಾಮ ಪಂಚಾಯತಿ ಲೆಕ್ಕಾಧಿಕಾರಿ ಜಗದೀಶ್, ನಲಗೇತನಹಟ್ಟಿ ಗ್ರಾಮ ಪಂಚಾಯಿತಿ ಲೆಕ್ಕಾಧಿಕಾರಿ ಹರೀಶ್ ಹಾಗೂ ಗ್ರಾಮ ಸಹಾಯಕ ಬೋರಣ್ಣ ಕುದಾಪುರ ,ವೀರೇಶ್ ಕೃಷ್ಣಮೂರ್ತಿ ಸೇರಿದಂತೆ ಇನ್ನು ಮುಂತಾದವರು ಉಪಸ್ಥಿತರಿದ್ದರು