filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 42;

ಚಳ್ಳಕೆರೆ :

ಸಿಸಿಟಿವಿ ಕಣ್ಗಾವಲಿನಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ.

ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಿದ್ದು, ಚಳ್ಳಕೆರೆ ತಾಲೂಕಿನಲ್ಲಿ ಕಸಬಾ ಹಾಗೂ ತಳಕು, ನಾಯಕನಹಟ್ಟಿ ಪಟ್ಟಣದ ಶ್ರೀ ತಿಪ್ಪೇರುದ್ರಸ್ವಾಮಿ ಗ್ರಾಮೀಣ ವಿದ್ಯಾ ಸಂಸ್ಥೆ ಮತ್ತು ಮಯೂರ ಇಂಟರ್ನ್ಯಾಷನಲ್ ಸ್ಕೂಲ್ ಎರಡು ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಬಂದೋಬಸ್ತ್ ನಡುವೆ ಎಸ್ ಎಸ್ ಎಲ್ ಸಿ ಪರಿಕ್ಷೆ ಆರಂಭವಾಗಿದೆ.

ಪರಿಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಲಭ್ಯಗಳ ಜೊತೆಗೆ ಸಿಸಿ ಕ್ಯಾಮರಾಗಳನ್ನು ಅಳವಡಿಸಿ ಕಟ್ಟು ನಿಟ್ಟಾಗಿ ಪರೀಕ್ಷೆ ನಡೆಸುತ್ತಿದ್ದಾರೆ.

ಶ್ರೀ ತಿಪ್ಪೇರುದ್ರಸ್ವಾಮಿ ಗ್ರಾಮೀಣ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ಬಿ. ಆರ್. ರಮೇಶ್ ಕುಮಾರ್ ಮಾತನಾಡಿದರು 2024 25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರವು ನಾಯಕನಟ್ಟಿ ಪಟ್ಟಣದಲ್ಲಿ ಎರಡು ಪರೀಕ್ಷೆ ಕೇಂದ್ರಗಳ ತೆರಿಯಲಾಗಿದೆ ಇನ್ನೂ ಎರಡು ಪರೀಕ್ಷಾ ಕೇಂದ್ರದಲ್ಲಿ 448 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು ಶ್ರೀ ತಿಪ್ಪೇರುದ್ರಸ್ವಾಮಿ ವಿದ್ಯಾ ಸಂಸ್ಥೆಯಲ್ಲಿ 205 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ ಅದರಲ್ಲಿ ಬಾಲಕರ ಸಂಖ್ಯೆ 115 ಬಾಲಕಿಯರ ಸಂಖ್ಯೆ 90 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು ಪರೀಕ್ಷೆಗೆ ಬೇಕಾದ ಮೂಲಭೂತ ಸೌಲಭ್ಯವನ್ನು ಕಚ್ಚುಕಟ್ಟಾಗಿ ತಾಲೂಕು ಜಿಲ್ಲಾಡಳಿತ ಶಿಕ್ಷಣ ಇಲಾಖೆ ವತಿಯಿಂದ ಅತ್ಯಂತ ಯಶಸ್ವಿಯಾಗಿ ಮಾಡಲಾಗಿದೆ ಪ್ರತಿಯೊಂದು ಕೊಠಡಿಯಲ್ಲಿ ಸಿಸಿಟಿವಿ ಅಳವಡಿಸಲಾಗಿದೆ ಎಂದರು.

ಇನ್ನೂ ಮಯೂರ ಇಂಟರ್ನ್ಯಾಷನಲ್ ಸ್ಕೂಲ್ ಎಸ ಎಸ ಎಲ್ ಸಿ ಪರೀಕ್ಷೆಯ ಮುಖ್ಯ ಅಧೀಕ್ಷಕರಾದ ಬಿ. ವಿ. ನಾಥ್ ಮಾತನಾಡಿದರು ಪಟ್ಟಣದ ಮಯೂರ ಇಂಟರ್ನ್ಯಾಷನಲ್ ಸ್ಕೂಲ್ ಶಾಲೆಯಲ್ಲಿ 243 ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು ಅದರಲ್ಲಿ ಬಾಲಕರು 120 ಮತ್ತು ಬಾಲಕಿಯರು 123 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಚಕ್ ಅಪ್ ಮಾಡಿ ಪರೀಕ್ಷೆ ಕೇಂದ್ರಕ್ಕೆ ಕಳಿಸಲಾಗಿದೆ ವೆಬ್ ಕಾಸ್ಟಿಂಗ್ ಮತ್ತು ಸಿಸಿಟಿವಿ ಕಣ್ಗಾವಲಿಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು ಇನ್ನೂ ವಿದ್ಯಾರ್ಥಿಗಳಿಗೆ ಕುಡಿಯುವ ನೀರು ಶೌಚಾಲಯ ಆಸ್ಪತ್ರೆ ಪೊಲೀಸ್ ಇಲಾಖೆ ಸಹಕಾರದೊಂದಿಗೆ ಯಶಸ್ವಿಯಾಗಿ ಆ ಪರೀಕ್ಷೆಯನ್ನು ಬರಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಮಯೂರ ಇಂಟರ್ನ್ಯಾಷನಲ್ ಸ್ಕೂಲ್, ಕಾರ್ಯದರ್ಶಿ ಮೈಲಾರ ಸ್ವಾಮಿ, ಶ್ರೀ ತಿಪ್ಪೇರುದ್ರಸ್ವಾಮಿ ಶಾಲೆಯ ಶಿಕ್ಷಕ ಫಣಿಯೇಂದ್ರ, ಪಿಎಸ್ಐ ದೇವರಾಜ್, ಶಾಲೆಯ ಶಿಕ್ಷಕರು ಶಿಕ್ಷಕರು ವಿದ್ಯಾರ್ಥಿನಿಯರು ವಿವಿಧ ಹಳ್ಳಿಗಳ ಗ್ರಾಮಸ್ಥರು ಉಪಸ್ಥಿತರಿದ್ದರು

About The Author

Namma Challakere Local News
error: Content is protected !!