ನಾಯಕನಹಟ್ಟಿ ;:
ಪಟ್ಟಣ ಪಂಚಾಯತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಘೊಷಣೆ ಮಾಡುವಂತೆ ಪಟ್ಟಣದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕರವೆ ಹೋಬಳಿ ಅಧ್ಯಕ್ಷ ಬಿ.ತಿಪ್ಪೇಸ್ವಾಮಿ ಮಾತನಾಡಿ ಪಟ್ಟಣ ಪಂಚಾಯಿತಿಯ ಚುನಾವಣೆ ನಡೆದು ಐದು ಆರು ತಿಂಗಳು ಕಾಲ ಕಳೆದರು. ಪಟ್ಟಣ ಪಂಚಾಯತಿ ಸ್ಥಾನಗಳಿಗೆ ಮೀಸಲಾತಿ ಘೋಷಣೆ ಮಾಡಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆ ಮಾಡಬೇಕು.
ಪಪಂಗೆ ಅಧ್ಯಕ್ಷರು, ಉಪಾಧ್ಯಕ್ಷರು ಇಲ್ಲದೆ ಪಟ್ಟಣ ಪಂಚಾಯತಿ ವ್ಯಾಪ್ತಿಯ ಸುಮಾರು ೧೬ ವಾರ್ಡ್ಗಳ ಸಾರ್ವಜನಿಕರಿಗೆ ಯಾವುದೇ ಸರ್ಕಾರದ ಸೌಲಭ್ಯ ದೊರೆಯದ ಕಾರಣ ಸಾರ್ವಜನಿಕರು ಸೌಲಭ್ಯ ವಂಚಿತರಾಗಿದ್ದಾರೆ.
ಕೂಡಲೇ ಸರ್ಕಾರ ನಾಯಕನಹಟ್ಟಿ ಪಪಂನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಘೊಷಣೆ ಮಾಡಿ, ಅಧ್ಯಕ್ಷರು ಉಪಾಧ್ಯಕ್ಷರು ನೇಮಕ ಮಾಡಬೇಕೆಂದು ಒತ್ತಾಯ ಮಾಡಿದರು.
ಈ ವೇಳೆ ನಾಯಕನಹಟ್ಟಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಪಂ ಅಧ್ಯಕ್ಷರು, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಘೋಷಣೆ ಮಾಡುವಂತೆ ಘೋಷಣೆಗಳನ್ನು ಕೂಗುತ್ತಾ ನಾಡಕಛೇರಿಗೆ ಆಗಮಿಸಿ ಉಪತಹಶೀಲ್ದಾರ್ ಹಾಗೂ ಪಪಂ ಗೆ ಮನವಿ ಸಲ್ಲಿಸಿದ್ದಾರೆ.