ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು

ಚಳ್ಳಕೆರೆ ತಾಲ್ಲೂಕಿನ ಗೋಸಿಕೆರೆ ಗ್ರಾಮದಲ್ಲಿ ನಡೆದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳ, ಹೈಮಾಸ್ಕ ಲೈಟ್, ಮತ್ತು ರಸ್ತೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ನೆರವೇರಿಸಿದರು.

ಚಳ್ಳಕೆರೆ ತಾಲ್ಲೂಕಿನ ಗೋಸಿಕೆರೆ ಗ್ರಾಮದಲ್ಲಿ 2024-25ನೇ ಸಾಲಿನ ಚಿತ್ರದುರ್ಗ ಜಿಲ್ಲಾ ಖನಿಜ ನಿಧಿ ಯೋಜನೆಯಡಿ ಸುಮಾರು ರೂ. 10.00ಲಕ್ಷಗಳ ವೆಚ್ಚದ ಹೈಮಾಸ್ಕ್ ಲೈಟ್, ಸುಮಾರು ರೂ.115.00ಲಕ್ಷಗಳ ವೆಚ್ಚದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳ ನಿರ್ಮಾಣ ಕಾಮಗಾರಿ ಮತ್ತು ಪ್ರಗತಿ ಕಾಲೋನಿಯ ಯೋಜನೆಯಡಿ ಸುಮಾರು ರೂ 150.00ಲಕ್ಷಗಳ ವೆಚ್ಚದ ಗೋಸೀಕೆರೆ ಗ್ರಾಮದಿಂದ ಕರಿತಿಪ್ಪೇಗೆ ಹೋಗುವ ರಸ್ತೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಸಿದ್ದೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಓಬಳೇಶ್, ಉಪಾಧ್ಯಕ್ಷರು, ಸದಸ್ಯರುಗಳು, ಹಿರಿಯ ಮುಖಂಡರಾದ ಪ್ರಭುದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ, ಮುಖಂಡರುಗಳಾದ ನಾಗೇಂದ್ರಪ್ಪ, ಓಂಕಾರ ಮೂರ್ತಿ, ತಿಪ್ಪೇಸ್ವಾಮಿ, ಬಸವರಾಜ್, ತಿಪ್ಪೇಸ್ವಾಮಿ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!