ಚಳ್ಳಕೆರೆ ‌: ತಾಲ್ಲೂಕಿನ ತೋರೆಬೀರನಹಳ್ಳಿ ಗ್ರಾಮದಲ್ಲಿ ನಡೆದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳ ಮತ್ತು ಶ್ರೀ ಕರಿಯಮ್ಮ ದೇವಿ ದೇವಸ್ಥಾನದ ಕಟ್ಟಡ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ. ರಘುಮೂರ್ತಿ
ಪಾಲ್ಗೊಂಡು ಪೂಜೆ ನೆರವೇರಿಸಿದರು.

ರಾಜ್ಯದ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಸುಮಾರು ರೂ. 10.00ಲಕ್ಷಗಳ ಅನುದಾನದಡಿ ಶ್ರೀ ಕರಿಯಮ್ಮ ದೇವಿ ದೇವಸ್ಥಾನದ ಭೂಮಿ ಪೂಜೆ ಮತ್ತು 2024-25ನೇ ಸಾಲಿನ ಚಿತ್ರದುರ್ಗ ಜಿಲ್ಲಾ ಖನಿಜ ನಿಧಿ ಯೋಜನೆಯಡಿ ಸುಮಾರು ರೂ. 30.00ಲಕ್ಷ ಗಳ ಅನುದಾನದಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಸಿದ್ದೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಓಬಳೇಶ್, ಉಪಾಧ್ಯಕ್ಷರು, ಸದಸ್ಯರುಗಳು, ಹಿರಿಯ ಮುಖಂಡರಾದ ಪ್ರಭುದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ, ಮುಖಂಡರುಗಳಾದ ರಾಜಪ್ಪ, ಹನುಮಂತ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!