ದಿನ ಬಳಕೆ ವಸ್ತುಗಳ ಬೆಲೆ ಏರಿಕೆ ಹಾಗೂ ರೈತ ವಿರೋಧಿ ನೀತಿಗಳನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ 

ಚಳ್ಳಕೆರೆ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸರ್ವಾಧಿಕಾರ ಧೋರಣೆ ಅನುಸರಿಸಿ ಸಾರ್ವಜನಿಕರು ದಿನ ನಿತ್ಯ ಬಳಸುವಂತಹ ವಸ್ತುಗಳ ಬೆಲೆ ಏರಿಕೆಯನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. 

ಈ ವೇಳೆ ಮಾತಾಡಿದ ಸಂಘಟನೆಯ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ 75ರಷ್ಟು ಪ್ರಜೆಗಳು ತಮ್ಮ ಸ್ವಂತ ಶ್ರಮದಿಂದ ಸರ್ಕಾರಗಳಿಗೆ ತೆರಿಗೆ ಕಟ್ಟುತ್ತಾ ಬಂದಿದ್ದರು ಸಹ ರೈತರ ಕಷ್ಟಗಳಿಗೆ ನೆರವಾಗದೆ ಪದೇ ಪದೇ ಬೆಲೆ ಏರಿಕೆ ಮಾಡುತ್ತಿರುವ ಸರ್ಕಾರಗಳು ಹಗಲು ದರೋಡೆ ಮಾಡಿದಂತಾಗಿದೆ ರಾಜ್ಯದಲ್ಲಿ ಸರ್ಕಾರ ರಚನೆಯಾಗಿ ಎರಡು ವರ್ಷ ಕಳೆದರೂ ಕೂಡ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ರೈತರ ಕಷ್ಟಗಳನ್ನು ಅನುಭವಿಸುತ್ತಿದ್ದರು ಹಾಗೂ ಕೃಷಿಗಾಗಿ ಮಾಡಿದ ಸಾಲ ತೀರಿಸಲಾಗಿದೆ ರೈತರು ಆತ್ಮಹತ್ಯೆಗಳು ಮಾಡಿಕೊಂಡರು ರೈತರ ಸಾಲ ಮನ್ನಾ ಮಾಡಿಲ್ಲ ಹಾಗೂ ಜಿಲ್ಲೆಯ ಕನಸಿನ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆ ನೀರಿಗಾಗಿ ವಿದ್ಯುತ್ ಗಾಗಿ ಅನೇಕ ಹೋರಾಟಗಳನ್ನು ಮಾಡಿದರು ಸರ್ಕಾರ ಮತ್ತು ಜನಪ್ರತಿನಿಧಿಗಳು ತಮ್ಮ ಅಧಿಕಾರ ಭದ್ರ ಮಾಡಿಕೊಳ್ಳಲು ಮತ್ತು ತಮ್ಮ ಇಚ್ಚಾ ಶಕ್ತಿಗಳನ್ನು ಕಾಪಾಡಿಕೊಳ್ಳಲು ತಮ್ಮ ಅನುಕೂಲಕ್ಕೆ ತಕ್ಕಂತೆ ಕಾನೂನುಗಳನ್ನು ಜಾರಿ ಮಾಡಿಕೊಳ್ಳುತ್ತಾ ಮುಖ್ಯಮಂತ್ರಿ ಸೇರಿದಂತೆ ಮಂತ್ರಿಗಳು ಶಾಸಕರು ಸಾರ್ವಜನಿಕರ ಅಭಿಪ್ರಾಯ ಪಡೆಯದೆ ತಮ್ಮ ಸಂಬಳ ಮತ್ತು ದಿನ ಭತ್ಯೆಗಳನ್ನು ಹೆಚ್ಚು ಮಾಡಿ ಕೊಂಡಿರುವುದು ಖಂಡನಾರ್ಹ ರಾಜ್ಯ ಸರ್ಕಾರ ಜನಸಾಮಾನ್ಯರ ಹಾಗೂ ರೈತರ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದ್ದು ಮುಂದಿನ ಚುನಾವಣೆಯಲ್ಲಿ ಇಂತಹ ರೈತ ವಿರೋಧಿ ಸರ್ಕಾರಗಳಿಗೆ ತಕ್ಕ ಪಾಠ ಕಲಿಸಲಾಗುವುದು ಅಲ್ಲದೆ ತಾಲೂಕಿನಲ್ಲಿ ಅತಿವೃಷ್ಟಿ ಮಳೆಯಿಂದ ತೊಗರಿ ಬೆಳೆ ನಷ್ಟವಾಗಿದ್ದು ನಷ್ಟವಾದ ರೈತರಿಗೆ ಬೆಳೆ ವಿಮಾ ಪರಿಹಾರ ನೀಡಬೇಕು ಬೆಂಬಲ ಬೆಲೆ ಯೋಜನೆ ಅಡಿ ರೈತರಿಂದ ಖರೀದಿಸಿದ ತೊಗರಿಗೆ ಕೇಂದ್ರ ಸರ್ಕಾರದ 7550 ರೂ ಮಾತ್ರ ರೈತರ ಖಾತೆಗೆ ಹಾಕಿದ್ದು ರಾಜ್ಯ ಸರ್ಕಾರದ 450 ಪ್ರೋತ್ಸಾಹ ಧನ ತಕ್ಷಣ ನೀಡಬೇಕು 2025ರ ವರ್ಷದೊಳಗೆ ಭದ್ರಾ ಯೋಜನೆ ನೀರು ಚಿತ್ರದುರ್ಗ ಜಿಲ್ಲೆಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸದಿದ್ದರೆ ಜಿಲ್ಲೆಯ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಲಾಗುವುದು ಎಂದು ಸರ್ಕಾರವನ್ನು ಇದೆ ವೇಳೆ ಎಚ್ಚರಿಸಿದರು. 

ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ರಹನ್ ಪಾಶ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೀಡಿರುವ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ತಲುಪಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಶ್ರೀಕಂಠ ಮೂರ್ತಿ ಗೌರವಾಧ್ಯಕ್ಷ ಚನ್ನಕೇಶವ ಮೂರ್ತಿ ಪ್ರಧಾನ ಕಾರ್ಯದರ್ಶಿ ಬಸವರಾಜ ರಾಜಣ್ಣ ಸಣ್ಣ ಪಾಲಯ್ಯ ಓಬಯ್ಯ ಶಿವಕುಮಾರ್ ಈರಣ್ಣ ತಿಪ್ಪೇಸ್ವಾಮಿ ಮಹಮ್ಮದ್ ನಯಾಜ್ ಜಯಣ್ಣ ದೊಡ್ಡಣ್ಣ ಹನುಮಂತಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!