ಚಳ್ಳಕೆರೆ :
ಚಳ್ಳಕೆರೆ ನಗರದ ಜೈನ ಸಮುದಾಯ ಭವನದಲ್ಲಿ ನಡೆದ ಶ್ರೀ ಮಹಾವೀರ ಜಯಂತಿ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಪಾಲ್ಗೊಂಡು ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಗಳಾದ ರೇಹಾನ್ ಪಾಷಾ, ನಗರಸಭೆ ಅಧ್ಯಕ್ಷರಾದ ಮಂಜುಳಾ ಆರ್ ಪ್ರಸನ್ನಕುಮಾರ್, ಉಪಾಧ್ಯಕ್ಷರಾದ ಸುಮಾ ಭರಮಯ್ಯ, ಸದಸ್ಯರುಗಳು, ನಾಮ ನಿರ್ದೇಶನ ಸದಸ್ಯರುಗಳು, ತಾಲ್ಲೂಕು ಪಂಚಾಯತ್ ಕೆಡಿಪಿ ನಾಮ ನಿರ್ದೇಶನ ಸದಸ್ಯರಾದ ರಮೇಶ್, ತಾಲ್ಲೂಕು ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ಜೈನ ಸಮುದಾಯದ ಮುಖಂಡರುಗಳು, ಕಾರ್ಯಕರ್ತರು, ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

