ಚಿತ್ರದುರ್ಗ : ಕೇಂದ್ರ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣದ ಫಲವಾಗಿ ಇ.ಡಿ ಮೂಲಕ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಮುಖಂಡರಾದ ರಾಹುಲ್ ಗಾಂಧಿ ಅವರಿಗೆ ಕಿರುಕುಳ ಹಾಗೂ ದೌರ್ಜನ್ಯದ ಬಗ್ಗೆ ಖಂಡಿಸಿ ಹಾಗೂ ನವದೆಹಲಿಯ ಎಐಸಿಸಿ ಕಚೇರಿಗೆ ಕಾಂಗ್ರೆಸ್ ನಾಯಕರ ಪ್ರವೇಶಕ್ಕೆ ನಿಷೇಧಿಸಿರುವ ದೆಹಲಿ ಪೊಲೀಸರ ನಡೆಯನ್ನು ಖಂಡಿಸಿ,
ಇಂದು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿರುವ ಪ್ರತಿಭಟನೆ ಹಾಗೂ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ ಭಾಗವಹಿಸಿ ಆಕ್ರೊಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಮಾಜಿ ಚಿತ್ರದುರ್ಗ ಲೋಕಸಭಾ ಸಂಸದರಾದ ಬಿಎನ್ ಚಂದ್ರಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜ್‌ಪೀರ್, ಕಾರ್ಯಾಧ್ಯಕ್ಷ ಹಾಲೇಶ್, ಮಾಜಿ ಶಾಸಕ ತಿಪ್ಪೇಸ್ವಾಮಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮಪ್ಪ, ಮಾಜಿ ವಿಧಾನ ಪರಿಷದ್ ಸದಸ್ಯ ರಘು ಆಚಾರ್, ಮುಖಂಡರಾದ ಭೀಮಸಮುದ್ರ ಜಿ.ಎಸ್.ಮಂಜುನಾಥ್, ಕೆಪಿಸಿಸಿ ಅಸಂಘಟಿತ ಕಾರ್ಮಿಕರ ಅಧ್ಯಕ್ಷ ಮಂಜುನಾಥ್, ಮುಖಂಡರಾದ ಹನುಮಲಿ ಶನ್ಮುಖಪ್ಪ, ಸೋಮಣ್ಣ, ಸೇರಿದಂತೆ ಅನೇಕ ಕಾಂಗ್ರೆಸ್ ಪಕ್ಷದ ನಾಯಕರು, ಯುವ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.