ಚಳ್ಳಕೆರೆ

ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಬೆಂಗಳೂರು ವಿಭಾಗ ಮಟ್ಟದ ಸಂವಾದ ಸಭೆ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಚಳ್ಳಕೆರೆ‌‌ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಪಾಲ್ಗೊಂಡು ಮಾತನಾಡಿದರು.

ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್ ಚಿತ್ರದುರ್ಗ ಇವರ ವತಿಯಿಂದ ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಡಾ. ಡಿ.ಎಂ.ನಂಜುಂಡಪ್ಪ ವರದಿಯ ಅನುಷ್ಠಾನ ದಿಂದ ತಾಲ್ಲೂಕುಗಳು ಅಭಿವೃದ್ಧಿ ಹೊಂದಿರುವ ಬಗ್ಗೆ ಹಾಗೂ ಅಭಿವೃದ್ಧಿ ಹೊಂದದೆ ಇರುವ ತಾಲ್ಲೂಕುಗಳನ್ನು ಗುರುತಿಸಿ ಹೊಸದಾಗಿ ಸೂಚ್ಯಂಕವನ್ನು ಕಂಡುಹಿಡಿದು ಪ್ರಾದೇಶಿಕ ಅಸಮತೋಲನವನ್ನು ನಿವಾರಣೆ ಮಾಡಲು ರಾಜ್ಯ ಸರ್ಕಾರವು ಆರ್ಥಿಕ ತಜ್ಞರಾದ ಪ್ರೊ. ಎಂ.ಗೋವಿಂದರಾವ್ ರವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಅವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಬೆಂಗಳೂರು ವಿಭಾಗ ಮಟ್ಟದ ಸಂವಾದ ಸಭೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ ಸುಧಾಕರ್ ರವರು, ಸಂಸದರಾದ ಗೋವಿಂದ ಎಂ ಕಾರಜೋಳ ರವರು, ಶಾಸಕರುಗಳಾದ ಎನ್.ವೈ.ಗೋಪಾಲಕೃಷ್ಣ ರವರು, ಡಾ. ಎಂ.ಚಂದ್ರಪ್ಪ ರವರು, ಕೆ ಸಿ ವೀರೇಂದ್ರ ಪಪ್ಪಿ ರವರು, ಜಿಲ್ಲಾಧಿಕಾರಿಗಳಾದ ವೆಂಕಟೇಶ್ ರವರು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಳಾದ ಸೋಮಶೇಖರ್ ರವರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!