ಒಳ ಮೀಸಲಾತಿ ಕಲ್ಪಿಸಲು ಸರ್ಕಾರ ಹಮ್ಮಿಕೊಂಡಿರುವ ಜನಗಣತಿಯಲ್ಲಿ ಮೂಲ ಜಾತಿಯ ಹೆಸರನ್ನು ನಮೂದಿಸಿ: ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಎನ್ ಪ್ರಕಾಶ್
ಚಳ್ಳಕೆರೆ: ರಾಜ್ಯದಲ್ಲಿರುವ101 ಪರಿಶಿಷ್ಟ ಜಾತಿಯ ಬಂಧುಗಳು ರಾಜ್ಯದ್ಯಂತ ನಡೆಯುತ್ತಿರುವ ಒಳ ಮೀಸಲಾತಿಗಾಗಿ ದತ್ತಾಂಶ ಸಂಗ್ರಹಿಸಲು ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವತಿಯಿಂದ ಹಮ್ಮಿಕೊಂಡಿರುವ ಜನಗಣತಿ ಕಾರ್ಯಕ್ರಮದಲ್ಲಿ ಗಣಪತಿ ದಾರರು ತಮ್ಮ ನಿವಾಸಗಳಿಗೆ ಆಗಮಿಸಿದಾಗ ತಮ್ಮ ಮೂಲ ಜಾತಿಯ ಹೆಸರನ್ನು ಮಾತ್ರ ನಮೂದಿಸಬೇಕು ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ಜಿಲ್ಲಾಧ್ಯಕ್ಷ ಎನ್ ಪ್ರಕಾಶ್ ಮನವಿ ಮಾಡಿದ್ದಾರೆ.
ನಗರದ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು ಮೇ 5 ರಿಂದ 17ರ ತನಕ ಪ್ರಾರಂಭವಾಗಿರುವ ಒಳ ಮೀಸಲಾತಿ ಜಾರಿಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜನಗಣತಿಯನ್ನು ಆರಂಭಿಸಿದ್ದು ತಮ್ಮ ಮೂಲ ಜಾತಿಗಳಾದ ಮಾದಿಗ ಹೊಲಯ ಸಮಗಾರ ಡೋಹಾರ ಬೋವಿ ಲಂಬಾಣಿ ಕೊರಚ ಕೊರಮ ಎಂಬ ವಿವರಗಳನ್ನು ಸ್ಪಷ್ಟವಾಗಿ ನಮೂದಿಸಬೇಕು ಜನಗಣತಿಯಲ್ಲಿ ಆನ್ಲೈನ್ ನಲ್ಲಿ ವಿವರ ನೀಡ ಬಯಸುವವರು ತಮ್ಮ ಆಧಾರ್ ಕಾರ್ಡ್ ನೊಂದಿಗೆ ಜಾತಿ ಪ್ರಮಾಣ ಪತ್ರದ ಆರ್ ಡಿ ನಂಬರನ್ನು ಮಾಡಬಹುದಾಗಿದ್ದು ಗಣತಿ ಸಂದರ್ಭದಲ್ಲಿ ಆದಿ ಕರ್ನಾಟಕ ಆದಿ ದ್ರಾವಿಡ ಆದಿ ಆಂಧ್ರ ಹರಿಜನ ಎಂದು ಬರೆಸದೆ ತಮ್ಮ ಮೂಲ ಜಾತಿಗಳ ಹೆಸರುಗಳನ್ನು ಬರೆಸಬೇಕು ಇದರಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ಮೀಸಲಾತಿಯನ್ನು ಪಡೆಯಲು ಅನುಕೂಲವಾಗುತ್ತದೆ ಈ ಗಣತಿ ಕಾರ್ಯದಲ್ಲಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ಎಲ್ಲಾ ಹಂತದ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿ ಪರಿಶಿಷ್ಟ ಜಾತಿಯವರು ತಮ್ಮ ಮೂಲ ಜಾತಿಯನ್ನು ಬರೆಸುವಂತೆ ಜನರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದು ತಿಳಿಸಿದರು.
ಪಕ್ಷದ ರಾಜ್ಯ ಕಾರ್ಯದರ್ಶಿ ಭೀಮನಕೆರೆ ಶಿವಮೂರ್ತಿ ಮಾತಾಡಿ ಅಂಬೇಡ್ಕರ್ ಅವರ ಆಶಯದಂತೆ ಸಾಮಾಜಿಕ ಆರ್ಥಿಕ ಮತ್ತು ರಾಜಕೀಯ ನ್ಯಾಯ ಪ್ರತಿಯೊಬ್ಬ ನಾಗರಿಕರಿಗೆ ಸಿಗಬೇಕು ಸಂವಿಧಾನ ಪೀಠಿಕೆ ಮೀಸಲಾತಿಯ ಸೌಲಭ್ಯವನ್ನು ಪಡೆಯದ ವಂಚಿತ ಜಾತಿಗಳಿಗೆ ಆದ್ಯತೆ ಮೇಲೆ ಮೀಸಲಾತಿಯನ್ನು ಕಲ್ಪಿಸಬೇಕು ಎಂಬ ಮನೋಭಾವದಿಂದ ಸರ್ಕಾರ ಜಾತಿ ಗಣತಿಯ ನಂತರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

