ಚಳ್ಳಕೆರೆ :
ಚಳ್ಳಕೆರೆ ನಗರದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಪಾಲ್ಗೊಂಡು ಮಾತನಾಡಿದರು.
ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಗಳಾದ ಕುಮಾರಸ್ವಾಮಿ, ಉಪ ಕಾರ್ಯದರ್ಶಿ ಗಳಾದ ತಿಮ್ಮಣ್ಣ, ತಾಲ್ಲೂಕು ದಂಡಾಧಿಕಾರಿ ಗಳಾದ ರೇಹಾನ್ ಪಾಷಾ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗಳಾದ ಶಶಿಧರ, ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗಳಾದ ರವಿಕುಮಾರ್, ಪೌರಾಯುಕ್ತ ರಾದ ಜಗ್ಗರೆಡ್ಡಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾದ ಅಶೋಕ್, ತೋಟಗಾರಿಕೆ ಇಲಾಖೆ ಅಧಿಕಾರಿಗಳಾದ ವಿರುಪಾಕ್ಷಪ್ಪ, ತಾಲ್ಲೂಕು ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ನಗರಸಭೆ ಅಧ್ಯಕ್ಷರಾದ ಮಂಜುಳಾ ಆರ್ ಪ್ರಸನ್ನಕುಮಾರ್, ಉಪಾಧ್ಯಕ್ಷರಾದ ಕವಿತಾ ಬೋರಯ್ಯ, ತಾಲ್ಲೂಕು ಪಂಚಾಯತ್ ಕೆಡಿಪಿ ನಾಮ ನಿರ್ದೇಶನ ಸದಸ್ಯರಾದ ಬಸವರಾಜ್, ರಮೇಶ್, ಸುರೇಶ್, ನೇತ್ರಾವತಿ, ವಿಶ್ವನಾಥ ರೆಡ್ಡಿ, ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

