ಚಳ್ಳಕೆರೆ ನಗರದ ವೆಂಕಟೇಶ್ವರ ನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ನಮ್ಮ ಕ್ಲಿನಿಕ್ ಆಸ್ಪತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಟಿ.ರಘುಮೂರ್ತಿ ನಗರಸಭೆ ಅಧ್ಯಕ್ಷೆ ಮಂಜುಳಾ ಪ್ರಸನ್ನ ಕುಮಾರ್ ಹಾಗೂ ಉಪಾಧ್ಯಕ್ಷೆ ಕವಿತಾ
ಪಾಲ್ಗೊಂಡು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ತಾಲ್ಲೂಕು ಪಂಚಾಯತ್ ಕೆಡಿಪಿ ನಾಮ ನಿರ್ದೇಶನ ಸದಸ್ಯರಾದ ರಮೇಶ್, ನಗರಸಭೆ ಅಧ್ಯಕ್ಷರಾದ ಮಂಜುಳಾ ಆರ್ ಪ್ರಸನ್ನಕುಮಾರ್, ಉಪಾಧ್ಯಕ್ಷರಾದ ಕವಿತಾ ಬೋರಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ್, ಸದಸ್ಯರುಗಳಾದ ಶ್ರೀಮತಿ ಸುಮಾ ಭರಮಯ್ಯ, ರಮೇಶ್ ಗೌಡ, ಮುಖಂಡರುಗಳಾದ ಕೃಷ್ಣಮೂರ್ತಿ, ಹೊನ್ನುರುಸ್ವಾಮಿ, ಶಿವಮೂರ್ತಿ, ಶಿವಸ್ವಾಮಿ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

