ಚಳ್ಳಕೆರೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದೆ ಬರಲು ಇಂತಹ ಉನ್ನತ ವ್ಯಾಸಂಗ ದಾರಿದೀಪವಾಗಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ಅವರು ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಕಾಲೇಜ್ ಢೇ, ಹಾಗೂ ಪದವಿ ಪ್ರಧಾನ ಸಮಾರಂಭದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಓದುವ ವೇಳೆ ವಿದ್ಯಾರ್ಥಿಗಳು ತಮ್ಮ ಮನಸ್ಸನ್ನು ಒಂದೆಡೆ ಸೆಳೆದು ಉನ್ನತ ವ್ಯಾಸಂಗದ ಗುರಿ ಹೊಂದಿರಬೇಕು ಬದಲಾಗಿ ಅನ್ಯ ಮಾರ್ಗ ತುಳಿಯದೆ, ಹೆಚ್ಚಿನ ಅಂಕಗಳನ್ನು ಗಳಿಸಿ ಪೋಷಕರಿಗೆ ಕಿರ್ತಿ ತರಬೇಕು ಎಂದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಎಂ.ಎಂ.ಗುಂಡಪ್ಪ, ನಗರಸಭೆ ಅಧ್ಯಕ್ಷರಾದ ಮಂಜುಳಾ ಆರ್ ಪ್ರಸನ್ನಕುಮಾರ್, ಉಪಾಧ್ಯಕ್ಷರಾದ ಕವಿತಾ ಬೋರಯ್ಯ, ಸದಸ್ಯರುಗಳಾದ ರಮೇಶ್ ಗೌಡ, ಸುಮಾ ಭರಮಯ್ಯ, ಇಂಜಿನಿಯರಿಂಗ್ ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿ , ವಿದ್ಯಾರ್ಥಿನಿಯರು, ಆಡಳಿತ ಮಂಡಳಿ ಸದಸ್ಯರು, ಕಾಲೇಜು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

