ಚಳ್ಳಕೆರೆ :
ಗ್ರಾಮದಲ್ಲಿ ಬಾಲ್ಯವಿವಾಹ ಅಕ್ರಮ ಮದ್ಯಮಾರಟ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳು ನಡೆದರೆ ಕಾನೂನು ಕ್ರಮಕೈಕೊಳ್ಳಲಾಗುವುದು ಎಂದು ಡಿವೈಎಸ್ಪಿ ರಾಜಣ್ಣ ಹೇಳಿದರು.
ತಾಲೂಕಿನ ಗೋಪನಹಳ್ಳಿ ಗ್ರಾಮದ ದಲಿತ ಕಾಲೋನಿಯಲ್ಲಿ ಪೋಲಿಸ್ ಇಲಾಖೆವತಿಯಿಂದ ಆಯೋಜಿಸಿದ್ದ ಪರಿಶಿಷ್ಟ ಜಾತಿ ಪಂಗಡಗಳ ಕುಂದುಕೊರತೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಕಾಲೇಜಿಗೆಂದ ಹೋದ ವಿದ್ಯಾರ್ಥಿ ಹಾಗೂ ವಿದ್ಯಾರ್ತಿನಿಯರ್ ಪ್ರೀತಿ ಪ್ರೇಮದ ಬಲೆಗೆ ಬಿದ್ದು ತಂದೆ ತಾಯಿಯವರನ್ನು ಬಿಟ್ಟು ಓಡಿ ಹೋಗುವ ಪ್ರಕರಣಗಳು ಹೆಚ್ಚಾಗುತ್ತಿದ್ದು ಪೋಷಕರು ಮಕ್ಕಳ ಬಗ್ಗೆ ನಿಗಾವಹಿಸಬೇಕು.
ಓದುವ ವಯಸ್ಸಿನಲ್ಲಿ ಬಾಲ್ಯವಿವಾಹ ಮಾಡುವುದು . ಶಾಲಾಕಾಲೇಜು ಆವರಣದಲ್ಲಿ ಮದ್ಯ.ಗುಟ್ಕಾ ಸೇವನೆ ಕಾನೂನು ಅಪರಾದವಾಗಿದ್ದು
ಗ್ರಾಮದಲ್ಲಿ ಅಕ್ರಮವಾಗಿ ಮದ್ಯ
ಗಾಂಜಾ .ಇಸ್ಪೀಟ್. ಸೇರಿದಂತೆ ಕಾನೂನು ಬಾಹಿರ ಚಟುವಟಿಕೆ ಅಸ್ಪೃಶ್ಯತೆ ಆಚರಣೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಪಿಐ ಆರ್.ಎಫ್
ದೇಸಾಯಿ.ಪಿಎಸ್ ಐ ಧರೆಪ್ಪ ಮಾಹಿತಿ ನೀಡಿದರು.
ಸಭೆಯಲ್ಲಿ ಗ್ರಾಪಂ ಸದಸ್ಯರು. ಗ್ರಾಮಸ್ಥರು ಉಪಸ್ಥಿರಿದ್ದರು.

