ಪಗಡಲಬಂಡೆ ಗ್ರಾಪಂ ಅಧ್ಯಕ್ಷರಾಗಿ ಎನ್.ಮಹಾದೇವಪ್ಪ ಅವಿರೋಧವಾಗಿ ಆಯ್ಕೆ.

ಪರಶುರಾಂಪುರ.

ಸಮೀಪದ ಪಗಡಲಬಂಡೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎನ್.ಮಹಾದೇವಪ್ಪ ಅವರು ಅವಿರೋಧವಾಗಿ ಸೋಮವಾರ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಬಿಇಓ ಸುರೇಶ್ ತಿಳಿಸಿದರು.

ಈ ಹಿಂದೆ ಇದ್ದ ಗ್ರಾಪಂ ಅಧ್ಯಕ್ಷ ತಿಮ್ಮರಾಯಪ್ಪ ಅವರು ಹೃದಯಾಘಾತದಿಂದ ನಿಧನರಾದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಎನ್.ಮಹಾದೇವ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.

ನೂತನ ಅಧ್ಯಕ್ಷ ಎನ್.ಮಹಾದೇವ ಮಾತನಾಡಿ, ಪಗಡಲಬಂಡೆ ಗ್ರಾಮ ಪಂಚಾಯಿತಿಯನ್ನ ಸರ್ಕಾರದ ವಿವಿಧ ಅನುದಾನಗಳನ್ನು ಪಡೆಯುವ ಮೂಲಕ ಪಂಚಾಯಿತಿಯ ಸಮಗ್ರ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು ಎಂದರು.

ಈ ವೇಳೆಯಲ್ಲಿ ಚುನಾವಣಾಧಿಕಾರಿ ಸುರೇಶ್, ಸಹಾಯಕ ಶ್ರೀಧರ್, ಪಿಡಿಓ ಬಸವರಾಜು ಸೇರಿದಂತೆ ಗ್ರಾಪಂ ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!