“ಸ್ವಾಮಿ ವಿವೇಕಾನಂದರನ್ನು ಜಗದ್ವಿಖ್ಯಾತ ಮಾಡಿದ್ದು ಚಿಕಾಗೋ ಭಾಷಣ”- ಶ್ರೀಮತಿ ಜಯಮ್ಮ ನರಸಿಂಹಮೂರ್ತಿ ಅಭಿಪ್ರಾಯ. ಚಳ್ಳಕೆರೆ-ಸ್ವಾಮಿ ವಿವೇಕಾನಂದರನ್ನು ಜಗದ್ವಿಖ್ಯಾತ ಮಾಡಿದ್ದು 1893ರ ಸೆಪ್ಟೆಂಬರ್ 11ರಂದು ಅಮೇರಿಕಾದ ಚಿಕಾಗೋ ನಗರದಲ್ಲಿ ಮಾಡಿದ ಭಾಷಣ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸದ್ಭಕ್ತರು ಹಾಗೂ ನಿವೃತ್ತ ಶಿಕ್ಷಕಿ ಶ್ರೀಮತಿ ಜಯಮ್ಮ ನರಸಿಂಹಮೂರ್ತಿ ತಿಳಿಸಿದರು. ತ್ಯಾಗರಾಜನಗರದ ಶ್ರೀಮತಿ ನಂಜಮ್ಮ ಕೆಂಚಪ್ಪ ಶಿಕ್ಷಕರ ಸವಿತಾ ನಿವಾಸದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು “ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣ”ದ ಬಗ್ಗೆ ಉಪನ್ಯಾಸ ನೀಡಿದರು. ಈ ಸತ್ಸಂಗದ ಪ್ರಯುಕ್ತ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ ಶ್ರೀರಾಮರಕ್ಷಾ ಸ್ತೋತ್ರ ಪಠಣ ,ವಿಶೇಷ ಭಜನೆ ಹಾಗೂ “ಶ್ರೀಶಾರದಾದೇವೀ ಜೀವನಗಂಗಾ” ಗ್ರಂಥ ಪಾರಾಯಣ ಕಾರ್ಯಕ್ರಮವನ್ನು ಯತೀಶ್ ಎಂ ಸಿದ್ದಾಪುರ ನಡೆಸಿಕೊಟ್ಟರು. ಈ ಸತ್ಸಂಗ ಕಾರ್ಯಕ್ರಮದಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ಹೆಚ್ ಲಕ್ಷ್ಮೀದೇವಮ್ಮ, ಅನುಸೂಯ ರಾಘವೇಂದ್ರ, ಸರ್ವಮಂಗಳ, ತಿಪ್ಪಮ್ಮ ಉಮಾಶಂಕರ್, ಶ್ರೀಮತಿ ಎಂ ಗೀತಾ ನಾಗರಾಜ್, ಗೀತಾ ವೆಂಕಟೇಶ್ ರೆಡ್ಡಿ, ಬಿ.ಟಿ.ಗಂಗಾಂಬಿಕೆ, ಗಿರಿಜಾ ಜಗದೀಶ್, ಲಕ್ಷ್ಮೀದೇವಮ್ಮ,ಸರಸ್ವತಿ,ರಾಧಾ,ಸಹನ ಸೇರಿದಂತೆ ಸದ್ಭಕ್ತರು ಪಾಲ್ಗೊಂಡಿದ್ದರು.

About The Author

Namma Challakere Local News
error: Content is protected !!