ಚಳ್ಳಕೆರೆ : ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ತಿಪ್ಪೇಸ್ವಾಮಿ ಚಳ್ಳಕೆರೆ ನಗರಕ್ಕೆ ದಿಡೀರನೆ ಭೇಟಿ ನೀಡಿ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನೆಯನ್ನು ನಡೆಸಿ ಮಾಹಿತಿಯನ್ನು ಪಡೆದರು.
ಈಗಾಗಲೇ ರಾಜ್ಯದಲ್ಲಿ 10 ತಿಂಗಳ ಅವಧಿಯಲ್ಲಿ ಮಕ್ಕಳ ವಿವಿಧ ಬಾಲ್ಯ ವಿವಾಹ, ಬಾಲ ಗರ್ಭಿಣಿ , ಮಕ್ಕಳ ಮೇಲೊನ ದೌರ್ಜನ್ಯ ಹೀಗೆ ವಿವಿಧ ಪ್ರಕರಣಗಳಲ್ಲಿ ಸುಮಾರು 26,000 ಪ್ರಕಟಣೆಗಳು ಕಂಡುಬಂದಿವೆ.
ಇನ್ನು ಚಿತ್ರದುರ್ಗ ಜಿಲ್ಲೆಯಲ್ಲಿ 1037 ಪ್ರಕರಣಗಳಿವೆ. ಅದರಂತೆ ಗಡಿ ಭಾಗದ ಚಳ್ಳಕೆರೆ ತಾಲೂಕಿನಲ್ಲಿ 220 ಪ್ರಕರಣಗಳು ಇರುವುದು ವಿಷಾಧನೀಯ ಎಂದು ಅಸಮದಾನ ವ್ಯಕ್ತಪಡಿಸಿದರು.
ಅವರು ತಾಲೂಕಿನ ರೆಡ್ಡಿಹಳ್ಳಿ ಗ್ರಾಮದ ಗೊಲ್ಲರಹಟ್ಟಿಯಲ್ಲಿ ಜೂನ್ 6 ರಂದು ಬಾಲ್ಯ ವಿವಾಹಕ್ಕೆ ತಾಯಿಯೇ ಪ್ರೋತ್ಸಾಹ ನೀಡಿದ ಹಿನ್ನೆಲೆಯಲ್ಲಿ ಭೇಟಿ ನೀಡಿದ ಅವರು ಬಾಲಕಿಯನ್ನು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ನಡೆಸಿದರು.
ಇಡೀ ಜಿಲ್ಲೆಯಲ್ಲಿ ಅತಿಹೆಚ್ಚಿನ ಪ್ರಕರಣಗಳು ಚಳ್ಳಕೆರೆ ತಾಲೂಕಿನಲ್ಲಿ ಕಂಡುಬರುತ್ತವೆ ಆದ್ದರಿಂದ ತಾಲೂಕು ಮಟ್ಟ ಅಧಿಕಾರಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ ಮಕ್ಕಳ ಹಕ್ಕುಗಳ ಬಗ್ಗೆ ಹಾಗೂ ಕಾಯ್ದೆಗಳ ಬಗ್ಗೆ ಉಲ್ಲಂಘನೆಯಾದಲ್ಲಿ ಪ್ರಕರಣ ದಾಖಲಿಸಿಕೊಂಡು ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಬೇಕು ಎಂದು ಹೇಳಿದರು .
ಇದೇ ಸಂದರ್ಭದಲ್ಲಿ ಮಕ್ಕಳ ಹಕ್ಕುಗಳ ರಾಜ್ಯ ಸದಸ್ಯ ತಿಪ್ಪೇಸ್ವಾಮಿ, ಡಿವೈಸ್ ಪಿ ಬಿಟಿ ರಾಜಣ್ಣ, ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗಳು ಶಶಿಧರ್, ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಅಧಿಕಾರಿ ಸವಿತಾ, ಸಮಾಜ ಕಲ್ಯಾಣ ಅಧಿಕಾರಿಗಳು, ಬಿಸಿಎಂ ಅಧಿಕಾರಿ ರಮೇಶ್, ಸಿಡಿಪಿಓ ರಾಜ ನಾಯ್ಕ, ಪಿಎಸ್ಐ ದರಪ್ಪ ಬಾಳಪ್ಪ ದೊಡ್ಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ ಓ ಸುರೇಶ್, ಇನ್ನಿತರ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು


