ನಾಯಕನಹಟ್ಟಿ :- ಮದುವೆ ಮುಗಿಸಿಕೊಂಡು ಟ್ರ್ಯಾಕ್ಟರ್ ನಲ್ಲಿ ವಾಪಸ್ ಬರುತ್ತಿದ್ದಾಗ ಟ್ರ್ಯಾಕ್ಟರ್ ಮುಗಿಚಿ ಬಿದ್ದು ಇಪ್ಪತ್ತಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ನಾಯಕನಹಟ್ಟಿ ಹೋಬಳಿಯ ತಿಮ್ಮಪ್ಪಯ್ಯನಹಳ್ಳಿ ಗ್ರಾಮದಿಂದ ಮದುವೆಗೆಂದು ಜಗಳೂರು ತಾಲೂಕಿನ ಮಲ್ಲಾಪುರ ಗ್ರಾಮಕ್ಕೆ ಹೋಗಿ ಮದುವೆ ಮುಗಿಸಿಕೊಂಡು ವಾಪಸ್ ಟ್ರ್ಯಾಕ್ಟರ್ ನಲ್ಲಿ ಬರುತ್ತಿದ್ದ ವೇಳೆ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ನಾಯಕನಹಟ್ಟಿ ಸಮೀಪದ ಜಾಗನೂರಹಟ್ಟಿ ಬಳಿ ಟ್ರಾಕ್ಟರ್ ಪಲ್ಟಿಯಾಗಿದೆ.ಈ ಘಟನೆ ಭಾನುವಾರ ಸಂಜೆ 4:3ಸುಮಾರಿಗೆ ನಡೆದಿದೆ.ಟ್ರ್ಯಾಕ್ಟರ್ ನಲ್ಲಿದ್ದ ಸುಮಾರು 20 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಇದರಲ್ಲಿ ಏಳು ಜನರು ಗಂಭೀರವಾಗಿ ಗಾಯಗೊಂಡಿರುವವರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.ನಾಯಕನಹಟ್ಟಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ಕೂಡ ದಾಖಲಾಗಿದೆ.

About The Author

Namma Challakere Local News
error: Content is protected !!