ಜಿಲ್ಲೆಯ ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಉಪನ್ಯಾಸಕರು ಶ್ರಮವಹಿಸಿ: ಕೆ.ತಿಮ್ಮಯ್ಯ
ಮೊಳಕಾಲ್ಮುರು: ಶಾಲಾ ಶಿಕ್ಷಣ ಇಲಾಖೆ( ಪದವಿ ಪೂರ್ವ ) ಚಿತ್ರದುರ್ಗ ಜಿಲ್ಲೆಯ ನೂತನ ಉಪ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿರುವ ಕೆ. ತಿಮ್ಮಯ್ಯರವರನ್ನು ತಾಲೂಕಿನ ರಾಂಪುರ ಹೋಬಳಿಯ ಶ್ರೀ ಜಟ್ಟಂಗಿ ರಾಮೇಶ್ವರ ವಿದ್ಯಾಸಂಸ್ಥೆ ವತಿಯಿಂದ ಸನ್ಮಾನಿಸಿ ಕಾಲೇಜಿನ ಕುಂದು ಕೊರತೆಗಳ ಬಗ್ಗೆ ಮನವಿ ಮಾಡಲಾಯಿತು
ಸನ್ಮಾನ ಸ್ವೀಕರಿಸಿದ ನೂತನ ಉಪ ನಿರ್ದೇಶಕರು ಮಾತನಾಡಿ ತಮ್ಮ ಸಮಸ್ಯೆಗಳ ಬಗ್ಗೆ ಸಕರಾತ್ಮಕವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿದರು. ನಾನು ಜಿಲ್ಲೆಯ ದ್ವಿತೀಯ ಪಿಯುಸಿ ಫಲಿತಾಂಶ ಹೆಚ್ಚಿಸುವುದಕ್ಕೆ ಶ್ರಮಿಸುತ್ತೇನೆ. ಉಪನ್ಯಾಸಕರಗಳು ತಮ್ಮ ಕೆಲಸವನ್ನು ಪ್ರಾಮಾಣಿಕತೆಯಿಂದ ನಿರ್ವಹಿಸಿ ಸಂಬಳ ತೆಗೆದುಕೊಳ್ಳಬೇಕು ಎಂಬುದು ನನ್ನ ಆಸೆಯಾಗಿದೆ ಹಾಗಾಗಿ ವಿದ್ಯಾರ್ಥಿಗಳ ಪಾಠ ಪ್ರವಚನಗಳಿಗೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ತರಗತಿಗಳು ಪ್ರಾರಂಭವಾಗುವುದಕ್ಕಿಂತ ಮುಂಚೆ ಉಪನ್ಯಾಸಕರುಗಳನ್ನು ನಿಯೋಜಿಸಿವುದಕ್ಕೆ ಕ್ರಮ ಕೈಗೊಂಡಿದ್ದೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಅಧಿಕಾರಿ ಕೆ.ಎನ್.ಅಶೋಕ ಕಾಲೇಜಿನ ಪ್ರಾಚಾರ್ಯ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಡಾ. ತಿಮ್ಮಣ್ಣ ಜಿಲ್ಲಾ ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ಎಸ್. ಲಕ್ಷ್ಮಣ ಉಪನ್ಯಾಸಕ ಮಹಮದ್ ಶಕೀಲ್ ಇತರರು ಉಪಸ್ಥಿತರಿದ್ದರು.

