Jun 12, 2025

ಬಾಲಕಾರ್ಮಿಕ ಪದ್ಧತಿ ಹಾಗೂ ಬಡತನ ನಿರ್ಮೂಲನೆಗೆ ಶಿಕ್ಷಣವೊಂದೇ ಪರಿಹಾರ:ಅಪರ  ಸಿವಿಲ್ ನ್ಯಾಯಾಧೀಶ:ಬಿ ಅರ್ ಪುನೀತ್ 

ಚಳ್ಳಕೆರೆ: ಸಮಾಜದಲ್ಲಿ ಬಾಲಕಾರ್ಮಿಕ ಪದ್ದತಿಯನ್ನು ಬುಡ ಸಮೇತ ಕಿತ್ತೊಗೆಯಲು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಜಾಗೃತಿ ವಹಿಸುವುದು ಬಹಳ ಮುಖ್ಯ ಎಂದು ಅಪರ ಸಿವಿಲ್ ನ್ಯಾಯಧೀಶರಾದ ಬಿ ಆರ್ ಪುನೀತ್ ರವರು ಕರೆ ನೀಡಿದರು.

ನಗರದ ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ ,ಮತ್ತು ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಕಾರ್ಯಕ್ರಮದ ಜಾಥಾಕ್ಕೆ ಚಾಲನೆ ನೀಡಿ

  ನಗರ ಸಭೆ ಅಧ್ಯಕ್ಷೆ ಮಂಜುಳಾ ಮಾತನಾಡಿ ದೇಶದಲ್ಲಿ ಸಧೃಡ ಸಮಾಜ ಕಟ್ಟಲು ಬಾಲಕಾರ್ಮಿಕರ ಬಳಕೆಯಾಗುತ್ತಿರುವುದು ವಿರೋಧಿ ನೀತಿಯಾಗಿದ್ದು,ಇವುಗಳ ಬಗ್ಗೆ ಜಾಗೃತಿ ವಹಿಸಿ ಮಕ್ಕಳನ್ನು ವಿದ್ಯಾಭ್ಯಾಸಕ್ಕೆ ನಿಯೋಜಿಸಬೇಕಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ 350 ರೂಗಳ ಒಂದು ದಿನದ ಕೂಲಿಗಾಗಿ ಮಕ್ಕಳನ್ನು ಶಾಲೆಗೆ ಸೇರಿಸದೆ ಕೂಲಿ ಕೆಲಸಕ್ಕೆ ಕರೆದೊಯ್ಯುತ್ತಾರೆ ಬಾಲ ಕಾರ್ಮಿಕ ಪದ್ಧತಿಯ ಬಗ್ಗೆ ಪ್ರಬಂಧ ಹಾಗೂ ಭಾಷಣಕ್ಕೆ ಸೀಮಿತವಾಗದೆ ವಿದ್ಯಾರ್ಥಿಗಳು ಸಹ ತಮ್ಮ ಸುತ್ತಮುತ್ತಲಿನ ಇಂತಹ ಪ್ರಕರಣಗಳು ಕಂಡು ಬಂದರೆ ಮನವರಿಕೆ ಮಾಡಿಕೊಟ್ಟು ಶಾಲೆಗೆ ಕರೆತರುವ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

ವಕೀಲರ ಸಂಘದ ಅಧ್ಯಕ್ಷ ಕೆ ಎಂ ನಾಗರಾಜ್ ಮಾತನಾಡಿ ಸರ್ಕಾರ 14 ವರ್ಷದೊಳಗಿನ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಿದ್ದು ಸಮವಸ್ತ್ರ ಬಿಸಿಊಟ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ನೀಡುತ್ತಿರುವುದರಿಂದ ಪೋಷಕರು ತಮ್ಮ ಮಕ್ಕಳನ್ನು ಬಾಲ್ಯದ ಅವಸ್ಥೆಯಲ್ಲಿ ದುಡಿಮೆಗೆ ಕಳುಹಿಸದೆ ಶಾಲೆಗೆ ಕಳುಹಿಸಿದರೆ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ತಮ್ಮ ಕುಟುಂಬದ ಬಡತನವನ್ನು ನಿರ್ಮೂಲನೆ ಮಾಡಲು ಮಕ್ಕಳಿಗೆ ಶಿಕ್ಷಣ ಕೊಡಿಸುವುದೊಂದೇ ಉತ್ತಮ ಮಾರ್ಗವಾಗಿದೆ ಬಡತನ ಹಾಗೂ ಅನಕ್ಷರತೆ ಇಂತಹ ಬಾಲಕಾರ್ಮಿಕ ಪದ್ಧತಿ, ಬೇರೂರಲು ಕಾರಣವಾಗಿದೆ ಇದನ್ನು ನಿರ್ಮೂಲನೆ ಮಾಡಲು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ತಿಳಿಸಿದರು.

ಈ ವೇಳೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಭೋದಿಸಲಾಯಿತು 

ಈ ಸಂದರ್ಭದಲ್ಲಿ ನಗರ ಸಭೆ ಉಪಾಧ್ಯಕ್ಷೆ ಕವಿತಾ ತಹಸಿಲ್ದಾರ್ ರೆಹಾನ್  ಪಾಷ ವಕೀಲರ ಸಂಘದ ಉಪಾಧ್ಯಕ್ಷ ಪಾಲಯ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಹನುಮಂತ್ ರಾಯಪ್ಪ ಕುರುಡಿಹಳ್ಳಿ ಶ್ರೀನಿವಾಸ್ ಬಿಇಓ ಕೆ ಎಸ್ ಸುರೇಶ್ ಕಾರ್ಮಿಕ ಇಲಾಖೆ ಅಧಿಕಾರಿ ಕುಸುಮ ಸಿ ಡಿ ಪಿ ಓ ರಾಜ ನಾಯಕ್ ಸೇರಿದಂತೆ ವಕೀಲರು ಹಾಗೂ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!