ಆರೋಗ್ಯಕರ ಜೀವನಕ್ಕಾಗಿ ಪರಿಸರ ಉಳಿಸಿ ಶ್ರೀ ಶ್ರೀ ದೇನಾ ಭಗತ್ ಗುರೂಜಿ ಸಲಹೆ.

ನಾಯಕನಹಟ್ಟಿ:: ಪರಿಸರದಲ್ಲಿ ಅಡಗಿದೆ ನಮ್ಮ ಅಳಿವು ಉಳಿವು ಎಂದು ಶ್ರೀ ಶ್ರೀ ದೇನಾ ಭಗತ್ ಗುರೂಜಿ ಹೇಳಿದರು.
ಗುರುವಾರ ಹೋಬಳಿಯ ಮಲ್ಲೂರಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ರೇಖಲಗೆರೆ ಲಂಬಾಣಿಹಟ್ಟಿ ಸಮೀಪದ ಶ್ರೀ ರಾಜಯೋಗ ಆಶ್ರಮ ರೇಖಲಗೆರೆ ಕಾವಲು ಪ್ರದೇಶದ ಕೋಟಿ ವೃಕ್ಷ ಅಭಿಯಾನ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು, ಪರಿಸರ ದಿನಾಚರಣೆ ಎಂಬುದು ಒಂದು ದಿನಕ್ಕೆ ಸೀಮಿತವಾಗಬಾರದು. ಆರೋಗ್ಯಕರ ಜೀವನಕ್ಕಾಗಿ ಪರಿಸರ ಪ್ರಮುಖ ಪಾತ್ರ ವಹಿಸುತ್ತದೆ ಈ ನಿಟ್ಟಿನಲ್ಲಿ ಸಮಾಜದ ನಾಗರಿಕರು ಹೆಚ್ಚು ಪರಿಸರ ಕಾಳಜಿ ವಹಿಸಿಕೊಳ್ಳಬೇಕು. ಗಿಡಗಳನ್ನು ನೆಟ್ಟು ಇತರರಿಗೂ ಗಿಡ ನೆಡುವಂತೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯನಿರ್ವಹಿಸಬೇಕು ಪ್ರತಿಯೊಬ್ಬರು ಪರಿಸರ ಸಂರಕ್ಷಿಸಬೇಕು ಗಿಡಮರಗಳನ್ನು ಹೆಚ್ಚು ಬೆಳೆಸುವುದರಿಂದ ಬಿಸಿಲಬೇಗೆ ಕಡಿಮೆಯಾಗುವ ಜೊತೆಗೆ ಜನರಿಗೆ ಉತ್ತಮ ಆಮ್ಲಜನಕ ದೊರೆಯಲಿದೆ ಎಂದರು.
ಈ ಸಂದರ್ಭದಲ್ಲಿ ನಿವೃತ್ತ ಹಿರಿಯ ಉಪನ್ಯಾಸಕ ಕೆ.ಸಿ. ತಿಪ್ಪೇಸ್ವಾಮಿ, ರೇಖಲಗೆರೆ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಚ್ .ಎ. ವೆಂಕಟೇಶ್ ಸೇರಿದಂತೆ ಮಲ್ಲೂರಹಳ್ಳಿ ಕ್ಲಸ್ಟರ್ ನ ಎಲ್ಲಾ ಶಿಕ್ಷಕರು ಶಿಕ್ಷಕಿಯರು ಭಾಗವಹಿಸಿ ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಯಶ್ವಸಿಗೊಳಿಸಿದರು.
ಕಾರ್ಯಕ್ರಮದಲ್ಲಿ ಮಲ್ಲೂರಹಳ್ಳಿ ಕ್ಲಸ್ಟರ್ ನ ಎಲ್ಲಾ ಶಿಕ್ಷಕ-ಶಿಕ್ಷಕಿಯರು, ಶಾಲೆಯ ವಿದ್ಯಾರ್ಥಿ -ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!