ಚಳ್ಳಕೆರೆ :
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಪಕ್ಷದ ಎಸ್‌ಟಿ ಮೋರ್ಚ ಕಾರ್ಯದರ್ಶಿಯೂ ಆಗಿದ್ದ ಕೆ.ಟಿ.ಕುಮಾರಸ್ವಾಮಿ ಅವರು ಬಿಜೆಪಿ ಜಿಲ್ಲಾ ಘಟಕದ ನೂತನ ಅಧಕ್ಷರಾಗಿ ನೇಮಕಗೊಂಡಿದ್ದಾರೆ.
ಮಾಜಿ ಸಚಿವ, ದಿ.ತಿಪ್ಪೇಸ್ವಾಮಿ ಅವರ ಪುತ್ರರೂ ಆಗಿರುವ ಕುಮಾರಸ್ವಾಮಿ ಈ ಹಿಂದೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರೂ ಆಗಿದ್ದರು.
ಚಳ್ಳಕೆರೆ ವಿಧಾನಸಭೆ ಎಸ್‌ಟಿ ಮೀಸಲು ಕ್ಷೇತ್ರದಿಂದ 3 ಬಾರಿ ಸ್ಪರ್ಧಿಸಿ ಸೋಲು ಕಂಡಿದ್ದರು. 2013ರಲ್ಲಿ ಕೆಜೆಪಿಯಿಂದ, 2018ರಲ್ಲಿ ಬಿಜೆಪಿ, 2023ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸೋತಿದ್ದರು. ಬಳಿಕ ಮರಳಿ ಬಿಜೆಪಿ ಸೇರ್ಪಡೆಯಾಗಿದ್ದರು.
ನಂತರ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದ ಇವರನ್ನು ಜಿಲ್ಲಾ ಘಟಕದ ಆಯ್ಕೆ ಮಾಡಲಾಗಿದ್ದು ಹಲವಾರು ವರ್ಷಗಳ ಬಳಿಕ ಚಳ್ಳಕೆರೆಗೆ ಜಿಲ್ಲೆಯ ಅಧ್ಯಕ್ಷ ಸ್ಥಾನ ಸಿಕ್ಕಿರುವುದರಿಂದ ಚಳ್ಳಕೆರೆ ನಗರದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಮುಖಂಡರು ನಗರದ ನೆಹರು ಸರ್ಕಲ್ ವಾಲ್ಮೀಕಿ ಸರ್ಕಲ್ ಬಳಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ….

