ಮಲೇರಿಯಾ ರೋಗ ತಡೆಗಟ್ಟಲು ಸಾರ್ವಜನಿಕರ ಜಾಗೃತಿ ಅಗತ್ಯ: ಡಾ.ಕಾಶಿ
ಚಳ್ಳಕೆರೆ: ಸಾರ್ವಜನಿಕರು ನಮ್ಮ ಸುತ್ತಮುತ್ತಲಿನ ಪರಿಸರ ಶುಚಿಯಾಗಿಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗಿ ಮಲೇರಿಯ ಸೇರಿದಂತೆ ಡೆಂಗ್ಯೂ ಚಿಕನ್ ಗುನ್ಯಾ ರೋಗಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ಕಾಶಿ ತಿಳಿಸಿದರು.
ನಗರದ ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಗಳ ಕಚೇರಿ ವತಿಯಿಂದ ಹಮ್ಮಿಕೊಂಡಿದ್ದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮನೆ ಸುತ್ತಮುತ್ತ ತ್ಯಾಜ್ಯ ಎಸೆಯದೆ ಶುಚಿಯಾಗಿಟ್ಟುಕೊಂಡು ಸೊಳ್ಳೆಗಳಿಂದ ರಕ್ಷಣೆ ಪಡೆದು ಆರೋಗ್ಯ ಕಾಪಾಡಿಕೊಳ್ಳಬೇಕು ಮಳೆಗಾಲದಲ್ಲಿ ಗುಂಡಿಗಳಲ್ಲಿ ನೀರು ಸಂಗ್ರಹಣೆಗೊಂಡು ಅದರಲ್ಲಿ ಸೊಳ್ಳೆಗಳು ಉತ್ಪತ್ತಿಗೊಳ್ಳುತ್ತವೆ. ಮನೆಯಲ್ಲಿ ನೀರನ್ನು ತೆರೆದಿಡಬಾರದು ಮೇಲಿಂದ ಮೇಲೆ ನೀರಿನ ತೊಟ್ಟಿಗಳನ್ನು ಶುಚಿಗೊಳಿಸಬೇಕು ಮಲಗುವಾಗ ಸೊಳ್ಳೆ ಪರದೆ ಉಪಯೋಗಿಸಬೇಕು ಎಂದು ಸಾರ್ವಜನಿಕರಿಗೆ ಅರಿವು ಮೂಡಿಸಿದರು
ಕಾರ್ಯಕ್ರಮದಲ್ಲಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ, ಎಸ್ ಬಿ ತಿಪ್ಪೇಸ್ವಾಮಿ, ಹಾಗೂ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಎಲ್ಲಾ ಹಿರಿಯ ನಿರಿಕ್ಷಣಾಧಿಕಾರಿಗಳು ಆರೋಗ್ಯ ನಿರೀಕ್ಷಣಾಧಿಕಾರಿಗಳು ಹಾಗೂ ಪ್ರಾಥಮಿಕ ಸುರಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತರು ಭಾಗವಹಿಸಿದ್ದರು.

