ಚಳ್ಳಕೆರೆ : ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಚಳ್ಳಕೆರೆಯ ಸಿಜಿಎಸ್ ಆಸ್ಪತ್ರೆಯ ಸಹಕಾರದೊಂದಿಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಿಗೆ ಹರಿಹರಿಯದ ಸಮಸ್ಯೆಗಳು ಹಾಗೂ ಹೆಣ್ಣು ಮಕ್ಕಳ ಕುರಿತು ಸ್ವಚ್ಛತೆ ಮತ್ತು ನೈರ್ಮಲ್ಯ ಬಗ್ಗೆ ಆಪ್ತ ಸಮಾಲೋಚನೆ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಚಾರದ ಪುಷ್ಪಲತಾ ಜಿಟಿ ವಹಿಸಿಕೊಂಡಿದ್ದರು.
ಈ ಕಾರ್ಯಕ್ರಮದಲ್ಲಿ ಸ್ತ್ರೀ ಪ್ರಸೂತಿ ತಜ್ಞರಾದ ಡಾ. ರೂಪ ಎಚ್ ಅವರು ವಿದ್ಯಾರ್ಥಿನಿಯರೊಂದಿಗೆ ಸುಮಾರು ಒಂದೂವರೆ ಗಂಟೆಗಳ ಕಾಲ ಸಮಲೋಚನೆಯ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿಕೊಟ್ಟರು.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ತಮ್ಮ ವೈಯಕ್ತಿಕ ಸಮಸ್ಯೆಗಳನ್ನು ತಜ್ಞರೊಂದಿಗೆ ಹಂಚಿಕೊಂಡು ಸೂಕ್ತ ಸಲಹೆಗಳನ್ನು ಪಡೆದುಕೊಂಡರು . ಈ ಕಾರ್ಯಕ್ರಮದಲ್ಲಿ ಏನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಶಾಂತ ಕುಮಾರಿ, ಹೀನಾ ಕೌಸರ್, ಜಾನಕಮ್ಮ, ರೇಖಾ ಹಾಗೂ ಲತಾ ರಾಣಿಯವರು ಉಪಸ್ಥಿತರಿದ್ದರು.

