ಚಳ್ಳಕೆರೆ :

ಚಿತ್ರದುರ್ಗ ನಗರದಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ),ಚಿತ್ರದುರ್ಗ ಪತ್ರಕರ್ತರ ಭವನದ ನವೀಕೃತ ಹೈಟೆಕ್ ಸಭಾಭವನ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್, ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ
ಪಾಲ್ಗೊಂಡು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಕಿಮಾರಸ್ವಾಮಿ, ಜಿಲ್ಲಾ ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಶಿವಣ್ಣ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಕೆ. ತಾಜ್ ಪೀರ್,ಕ.ರಾ.ಕಾ.ಪ. ಸಂಘದ ಪ್ರಧಾನ ಕಾರ್ಯದರ್ಶಿ ಲೋಕೇಶ್, ಕ.ರಾ.ಕಾ.ಪ. ಸಂಘದ ಜಿಲ್ಲಾಧ್ಯಕ್ಷರಾದ ಬಿ. ದಿನೇಶ್ ಗೌಡಗೆರೆ, ಸದಸ್ಯರುಗಳು, ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!