ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಟಿ ರಘುಮೂರ್ತಿ ರವರು ಪಾವಗಡ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭ ಹಾಗೂ ಶಂಕುಸ್ಥಾಪನಾ ಸಮಾರಂಭದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ಪಾವಗಡ ಇವರ ವತಿಯಿಂದ ಪಾವಗಡ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಯುತ ಸಿದ್ದರಾಮಯ್ಯ ರವರ ತುಂಗಭದ್ರಾ ಜಲಾಶಯದ ಹಿನ್ನೀರಿನಿಂದ ಪಾವಗಡ ತಾಲ್ಲೂಕು ಮತ್ತು ಪಟ್ಟಣ ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರಿನ ಸರಬರಾಜು ಯೋಜನೆ ಉದ್ಘಾಟನೆ, 2250 ಮೇಗಾವ್ಯಾಟ್ ಸೋಲಾರ್ ಪ್ಲಾಂಟ್ ನಿರ್ಮಾಣ ಘೋಷಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ/ ಶಂಕುಸ್ಥಾಪನೆ ಮತ್ತು ಸರ್ಕಾರಿ ಇಲಾಖೆಗಳ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ಮಾನ್ಯ ಗೃಹ ಸಚಿವರಾದ ಶ್ರೀ ಡಾ. ಜಿ.ಪರಮೇಶ್ವರ್ ರವರು, ಮಾನ್ಯ ಇಂಧನ ಸಚಿವರಾದ ಶ್ರೀ ಕೆ.ಜೇ.ಜಾರ್ಜ್ ರವರು, ಮಾನ್ಯ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಡಾ. ಎಚ್. ಸಿ. ಮಹದೇವಪ್ಪ ರವರು, ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಅವರು, ಮಾನ್ಯ ಅಧ್ಯಕ್ಷರು, ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಹಾಗೂ ಶಾಸಕರಾದ ಶ್ರೀ ಹೆಚ್.ವಿ.ವೆಂಕಟೇಶ್, ಮಾನ್ಯ ನವದೆಹಲಿ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಕರ್ನಾಟಕ ಸರ್ಕಾರ ಹಾಗೂ ಶಿರಾ ಶಾಸಕರಾದ ಶ್ರೀ ಟಿ.ಬಿ.ಜಯಚಂದ್ರ, ಸಂಸದರಾದ ಶ್ರೀ ಗೋವಿಂದ ಕಾರಜೋಳ ರವರು, ಜಿಲ್ಲಾಧಿಕಾರಿ ಗಳಾದ ಶ್ರೀಮತಿ ಶುಭಾ ಕಲ್ಯಾಣ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಳಾದ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಳಾದ ಅಶೋಕ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!