ಚಳ್ಳಕೆರೆ : ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಕೋನಿಗರಹಳ್ಳಿ ಗ್ರಾಮದ ಎಸ್.ಸಿ./ಎಸ್.ಟಿ. ಜನಾಂಗದವರು ನಡೆಸುತ್ತಿರುವ ಎಸ್.ಸಿ./ಎಸ್.ಟಿ. ದೌರ್ಜನ್ಯ ನಿಷೇಧ ಕಾಯ್ದೆ ಅನ್ವಯ ದೌರ್ಜನ್ಯ ಮತ್ತು ಸಾಮಾಜಿಕ ಬಹಿಷ್ಕಾರಕೊಳಗಾದ ಸಂತ್ರಸ್ತರಿಗೆ ಹಾಗೂ ಅವರನ್ನು ಅವಲಂಬಿತರಿಗೆ ನೇರ ಸಾಲ ಯೋಜನೆ ಅಡಿ ಶಾಲಾ ಹಾಗೂ ಸಹಾಯಧನ ಮತ್ತು ಭೂಒಡೆತನ ಯೋಜನೆಯಡಿ ಹಾಗೂ ಸ್ವಯಂ ಉದ್ಯೋಗ ಮತ್ತು ಉದ್ಯಮಶೀಲತೆ ಯೋಜನೆಯಡಿ ಅಳವಡಿಸುವ ಕುರಿತು ಹೆಚ್ಚುವರಿ ಅನುದಾನವನ್ನು ಬಿಡುಗಡೆ ಮಾಡಿ ಸರ್ಕಾರಿ ಆದೇಶವನ್ನು ಮಾಡಬೇಕಾಗಿ ನಡೆದ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ
ಭೇಟಿ ನೀಡಿ ಮನವಿ ಪತ್ರವನ್ನು ಸ್ವೀಕರಿಸಿದರು.
ಇನ್ನೂ ಮನವಿ ಸ್ವೀಕರಿಸಿ ಸಂಬಂಧ ಪಟ್ಟ ಸಚಿವರು ಹಾಗೂ ಅಧಿಕಾರಿಗಳು ಚರ್ಚಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಗಳಾದ ರೇಹಾನ್ ಪಾಷಾ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗಳಾದ ಶಶಿಧರ, ನಗರಸಭೆ ಅಧ್ಯಕ್ಷರಾದ ಶಿಲ್ಪ ಮುರಳೀಧರ್, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ್, ಸದಸ್ಯರಾದ ಕವಿತಾ ವೀರೇಶ್, ರಮೇಶ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ, ತಾಲ್ಲೂಕು ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ಕಿಸಾನ್ ಸೆಲ್ ಜಿಲ್ಲಾ ಅಧ್ಯಕ್ಷರಾದ ನಾಗರಾಜ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಾದ ದೇವ್ಲಾನಾಯ್ಕ್, ನಗರಸಭೆ ನಾಮ ನಿರ್ದೇಶನ ಸದಸ್ಯರಾದ ವೀರಭದ್ರ, ಬಡಗಿ ಪಾಪಣ್ಣ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

