ಚಳ್ಳಕೆರೆ :
ಗುರು, ಲಿಂಗ, ಜಂಗಮ ತತ್ವವನ್ನು ಜಗತ್ತಿಗೆ ಪಸರಿಸಿ, ನುಡಿದಂತೆ ನಡೆದ ವಚನಕಾರ ನುಲಿಯ ಚಂದಯ್ಯನವರು ಬಸವಣ್ಣನವರ ಕಾಯಕವೇ ಕೈಲಾಸ ಆಶಯವನ್ನು ಅಕ್ಷರಶಃ ತನ್ನ ಬದುಕಿನಲ್ಲಿ ಅನುಸರಿಸಿದ್ದರು ಎಂದು ತಹಶಿಲ್ದಾರ್ ರೇಹಾನ್ ಪಾಷ ಹೇಳಿದರು.
ನಗರದ ತಾಲ್ಲೂಕು ಕಛೇರಿಯ ಸಭಾಂಗಣದಲ್ಲಿ ಶನಿವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ “ನುಲಿಯ ಚಂದಯ್ಯ ಜಯಂತಿ” ಆಚರಣೆ ಸಮಾರಂಭದಲ್ಲಿ ನುಲಿಯ ಚಂದಯ್ಯ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಕಾಯಕ ಹಾಗೂ ದಾಸೋಹದ ಮೂಲಕ ಸಮಾಜಕ್ಕೆ ಬೆಳಕು ನೀಡಿದವರಲ್ಲಿ ನುಲಿಯ ಚಂದಯ್ಯರೂ ಒಬ್ಬರಾಗಿದ್ದು, ನುಲಿಯ ಚಂದಯ್ಯನವರು ಸುಮಾರು 48 ವಚನಗಳನ್ನು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆಯಾಗಿ ನೀಡಿದ್ದಾರೆ ಎಂದು ಹೇಳಿದರು.
ಇದೇ ಸಂಧರ್ಭದಲ್ಲಿ ನುಲಿಯ ಚಂದಯ್ಯ ಸಮುದಾಯದ ಮುಖಂಡರು, ಅಧಿಕಾರಿಗಳ ಹಾಜರಿದ್ದರು.

