ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ
ಚಳ್ಳಕೆರೆ: ನಗರದ ಪಾವಗಡ ರಸ್ತೆಯ ರೈಲ್ವೆ ನಿಲ್ದಾಣದ ಬಳಿ ಮೈನಿಂಗ್ ಡಬ್ಬಿಂಗ್ ಕಾರ್ಯ ನಡೆಯುತ್ತಿರುವುದನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ಬಿಜೆಪಿ ಹಾಗೂ ಸಾರ್ವಜನಿಕರು ಈ ಹಿಂದೆ ಪ್ರತಿಭಟನೆ ನಡೆಸಿದ್ದ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲಾ ಉಪ ವಿಭಾಗಾಧಿಕಾರಿ ಮಹಮ್ಮದ್ ಜಿಲಾನ್ ಮೈನಿಂಗ್ ಡಂಪಿಂಗ್ ಕಾರ್ಯ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ರೈಲ್ವೆ ಅಧಿಕಾರಿಗಳು ಹಾಗೂ ಪ್ರಕಾಶ್ ಸ್ಟೀಲ್ ಕಂಪನಿ ಸಿಬ್ಬಂದಿಗಳೊಂದಿಗೆ ಹಾಗೂ ಸುತ್ತಮುತ್ತಲಿನ ನಾಗರಿಕರೊಂದಿಗೆ ಚರ್ಚೆ ನಡೆಸಿ ಮಾಹಿತಿ ಪಡೆದರು.
ಈ ವೇಳೆ ಮಾತನಡಿದ ಅವರು ಮೈನಿಂಗ್ ಡಂಪಿಂಗ್ ಕಾರ್ಯ ಸ್ಥಗಿತಗೊಳಿಸುವಂತೆ ಸಾರ್ವಜನಿಕರ ದೂರಿನ ಮೇರೆಗೆ ಆಗಮಿಸಿದ್ದೇನೆ ಸುತ್ತಮುತ್ತಲಿನಲ್ಲಿ ವಾಸಿಸುವ ನಾಗರಿಕರಿಗೆ ಧೂಳು ಹರಡುತ್ತದೆ ಎಂದು ಆರೋಪಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸಿದರೆ ನಿಮ್ಮ ವ್ಯಾಪಾರ ವಹಿವಾಟಿಗೆ ಅನುಮತಿ ನೀಡಲಾಗುವುದಿಲ್ಲ ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಮಾರ್ಗ ಬದಲಿಸಿಕೊಂಡು ನಿಮ್ಮ ಮೈನಿಂಗ್ ಡಂಪಿಂಗ್ ಕಾರ್ಯವನ್ನು ನಡೆಸಬೇಕು. ಮೈನಿಂಗ್ ಡಂಪಿಂಗ್ ಕಾರ್ಯದ ಬಗ್ಗೆ ನಕಾಶೆ ತರಿಸಿಕೊಂಡು ಸ್ಥಳದಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ನಿರ್ದೇಶನ ನೀಡಿದರು ರೈಲ್ವೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಾರದ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಅವರು ಬೇರೆ ಇಲಾಖೆ ಅಧಿಕಾರಿಗಳನ್ನು ಇಲ್ಲಿಗೆ ಕಳುಹಿಸಿದ್ದು ಯಾಕೆ ಸಂಬಂಧಪಟ್ಟ ಅಧಿಕಾರಿಗಳು ಇದರ ಬಗ್ಗೆ ಜಾಗೃತಿ ವಹಿಸಬೇಕು ಎಂದು ತಿಳಿಸಿದರು.
ನಂತರ ಸಾರ್ವಜನಿಕರ ಆಹವಾಲನ್ನು ಆಲಿಸಿದ ಅವರು ಸಾರ್ವಜನಿಕರ ಮನವಿಗಳನ್ನು ಟಿಪ್ಪಣಿ ಮಾಡಿಕೊಂಡು ನನಗೆ ವರದಿ ನೀಡುವಂತೆ ತಾಲೂಕು ಮಟ್ಟದ ಹಾಗೂ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ರೆಹಾನ್ ಪಾಷಾ ಯೋಜನ ನಿರ್ದೇಶಕಿ ರೇಷ್ಮಾ ಹಾನಗಲ್ ವೃತ್ತ ನಿರೀಕ್ಷಕ ಕೆ ಕುಮಾರ್ ಪೌರಾಯುಕ್ತ ಜಗರೆಡ್ಡಿ ಲೋಹಿತ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

