ಬಿಎ.ವಿದ್ಯಾರ್ಥಿನಿ ವರ್ಷ ಹತ್ಯೆ ಖಂಡಿಸಿ ಚಳ್ಳಕೆರೆ ನಗರದಲ್ಲಿ ಮಾನವ ಸರಪಳಿ ಮೂಲಕ ಪ್ರತಿಭಟನೆ
ಚಳ್ಳಕೆರೆ:.
ನಗರದ ನೆಹರು ವೃತ್ತದಲ್ಲಿ ವಿವಿಧ ವಿದ್ಯಾರ್ಥಿ ಸಂಘಟನೆಗಳು ಹಾಗೂ ಕರ್ನಾಟಕ ಯುವರಕ್ಷಣ ವೇದಿಕೆ ಸದಸ್ಯರು ಮಾನವ ಸರಪಳಿ ನಿರ್ಮಿಸಿ ಆರೋಪಿಗಳನ್ನು ಬಂಧಿಸುವಂತೆ ಘೋಷಣೆ ಕೂಗಿದರು.
ಚಿತ್ರದುರ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ದ್ವಿತೀಯ ವರ್ಷದ ಬಿಎ ವಿದ್ಯಾರ್ಥಿನಿ ವರ್ಷ ರವರ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಸರಿದು ಬೆಂಕಿ ಹಚ್ಚಿ ಹತ್ಯೆ ಮಾಡಿರುವ ಘಟನೆ ಖಂಡಿಸಿ ತಾಲೂಕು ಕರ್ನಾಟಕ ಯುವ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು
ನಂತರ ತಾಲೂಕು ಕಚೇರಿ ಆವರಣದಲ್ಲಿ ಮಾತನಾಡಿದ ಕರ್ನಾಟಕ ಯುವ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಮಾರುತಿ ಮೊಗವೀರ ಹಿರಿಯೂರು ತಾಲೂಕಿನ ಕೋವೆರಹಟ್ಟಿ ಗ್ರಾಮದ ವಿದ್ಯಾರ್ಥಿನಿ ವರ್ಷ ಅಕಾಲಿಕವಾಗಿ ದಾರುಣ ಅಂತ್ಯ ಕಂಡಿದ್ದು ಇದರ ಹಿಂದೆ ಅತ್ಯಾಚಾರ ಮಾಡಿ ಹತ್ಯೆಗೈದಿರುವ ಶಂಕೆ ಇದ್ದು ಈ ಅಮಾನುಷ ಕೃತ್ಯ ಮಾನವೀಯ ಮೌಲ್ಯಗಳ ಮೇಲೆ ಕಳಂಕ ತರುವಂತಹದ್ದು ಇಂತಹ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಇಂತಹ ಘಟನೆಗಳಿಂದ ಪೋಷಕರು ಹೆಣ್ಣು ಮಕ್ಕಳನ್ನು ಕಾಲೇಜಿಗೆ ಕಳುಹಿಸಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಕೂಡಲೇ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ವಿದ್ಯಾರ್ಥಿ ವರ್ಷ ಸಾವಿಗೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕು ಅಲ್ಲದೆ ಬಾಲಕಿಯ ಪೋಷಕರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಅಗ್ರಹಿಸಿದರು
ಈ ಸಂದರ್ಭದಲ್ಲಿ ಕರ್ನಾಟಕ ಯುವರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಮಾರುತಿ ಮೊಗವೀರ, ರಾಜ್ಯ ಸಂಚಾಲಕ ಅಶೋಕ್, ಗೌರವಾಧ್ಯಕ್ಷ ತಿಪ್ಪೇಸ್ವಾಮಿ ತಾಲ್ಲೂಕು ಅಧ್ಯಕ್ಷ ರಾಧಾಕೃಷ್ಣ,ಉಪಾಧ್ಯಕ್ಷ ಗುರುರಾಜ್, ಜಯಣ್ಣ, ವಿದ್ಯಾರ್ಥಿ ಘಟಕದ ಆದಿತ್ಯ, ವಸಂತ್ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

