ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಚಿತ್ರದುರ್ಗ ನಗರದಲ್ಲಿ ನಡೆದ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದ ಮೆರವಣಿಗೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮೆರವಣಿಗೆಗೆ ಚಾಲನೆ ನೀಡಿದರು.
ಚಿತ್ರದುರ್ಗ ಜಿಲ್ಲಾ ಕೊರಮ ಜನಾಂಗದ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಚಿತ್ರದುರ್ಗ ನಗರದಲ್ಲಿ ನಡೆದ ರಾಜ್ಯ ಮಟ್ಟದ ಕುಳವ ಜನಾಂಗದ ಸಮಾವೇಶ ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ರವರ 918ನೇ ಜಯಂತಿಯ ಮೆರವಣಿಗೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಪ.ಜಾ. ಹಾಗೂ ಪ.ಪಂ. ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಪಲ್ಲವಿ ಜಿ. ರವರು, ಅಖಿಲ ಕರ್ನಾಟಕ ಕಳೆವ ಮಹಾಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ಭಜಂತ್ರಿ, ಗೌರವಾಧ್ಯಕ್ಷರಾದ ಹನುಮಂತಪ್ಪ ಗುಂಡೇರಿ , ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರಾದ ಕೆ.ಕೃಷ್ಣಪ್ಪ, ಮುಖಂಡರಾದ ಜಗದೀಶ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಸಮುದಾಯದವರು ಉಪಸ್ಥಿತರಿದ್ದರು.

