filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 45;

ಚಳ್ಳಕೆರೆ :
“ಧರ್ಮದ ಉಳಿವಿಗಾಗಿ ಧರ್ಮ ಯುದ್ಧ” ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ
ತಾಲೂಕು‌ ಬಿಜೆಪಿ ಮಂಡಲದ ವತಿಯಿಂದ
ಪ್ರತಿಭಟನೆ ನಡೆಸಲಾಯಿತು.

ನಗರದ ಪ್ರವಾಸಿ ಮಂದಿರದಿಂದ ಪ್ರಾರಂಭಗೊಂಡ ಪ್ರತಿಭಟನೆ ವಾಲ್ಮೀಕಿ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ತಹಶಿಲ್ದಾರ್ ಕಛೇರಿಗೆ ಘೋಷಣೆಗಳನ್ನು‌ ಕೂಗುತ್ತಾ ಜಿಲ್ಲಾ ಅಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಇನ್ನೂ ಬಿಜೆಪಿ ಜಿಲ್ಲಾ ಅಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಮಾತನಾಡಿ,
ಶ್ರೀ ಕ್ಷೇತ್ರ ಧರ್ಮಸ್ಥಳವು ಕೇವಲ ಕರ್ನಾಟಕವಲ್ಲದೇ ದೇಶಾದ್ಯಂತ ಕೋಟ್ಯಾಂತರ ಭಕ್ತಾಧಿಗಳನ್ನು
ಹೊಂದಿದ ಶ್ರದ್ಧಾಕೇಂದ್ರವಾಗಿದೆ. ಈ ಕ್ಷೇತ್ರಕ್ಕೆ ದಿನನಿತ್ಯ ಲಕ್ಷಾಂತರ ಮಂದಿ ಭಕ್ತಾಧಿಗಳು ಆಗಮಿಸುತ್ತಾರೆ,
ಹಿಂದುಗಳಿಗೆ ಇದು ಪ್ರಮುಖ ಧಾರ್ಮಿಕ ಶ್ರದ್ಧೆಯ ಕೇಂದ್ರವಾಗಿರುತ್ತದೆ, ಹಿಂದೂಗಳ ಧಾರ್ಮಿಕ
ಭಾವನೆಯನ್ನು ಅಪಮಾನಿಸುವ ದುರುದ್ದೇಶದಿಂದ ಕೆಲವು ಕಿಡಿಗೇಡಿಗಳು ಹಾಗೂ ಎಡಚರರು ಸುಳ್ಳು
ಅಪಪ್ರಚಾರವನ್ನು ಮಾಡುತ್ತಿದ್ದಾರೆ, ಇದರ ಹಿಂದೆ ಹಿಂದುಗಳ ಶ್ರದ್ದಾ ಭಕ್ತಿಯನ್ನು ಅತ್ಯಂತ ನಿಕೃಷ್ಟವಾಗಿ
ನಿಂದಿಸುವ ಹುನ್ನಾರವಿದೆ, ಇಂತಹ ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡುವ ಷಡ್ಯಂತರವು, ಕಾಂಗ್ರೆಸ್ ನ ಕೈವಾಡವಿದೆ ಎಂದು ಆರೋಪಿಸಿದರು ‌

ಇನ್ನೂ ಬಿಜೆಪಿ ಮುಖಂಡ ಜಯಪಾಲಯ್ಯ ಮಾತನಾಡಿ,
ಭಾರತದ ನ್ಯಾಯ ಸಂಹಿತೆ ಅಡಿಯಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಯಾವುದೇ ಆಧಾರಗಳಿಲ್ಲದೇ ಮಾಡಿದ
ಆರೋಪಕ್ಕೆ ರಾಜ್ಯ ಸರ್ಕಾರವು ಲಕ್ಷಾಂತರ ರೂಪಾಯಿಗಳನ್ನು ವ್ಯಯಿಸಿ, ಆತ ಹೇಳಿದ ಕಡೆಗಳಲ್ಲಿ
ಗುಂಡಿಗಳನ್ನು ತೋಡಿದೆ. ಆದರೆ ಈ ಅನಾಮಿಕನ ಹಿಂದಿರುವ ದೃಷ್ಟ ವ್ಯಕ್ತಿಗಳು ಯಾರು? ಮತ್ತು ಅವರು
ಮಾಡುತ್ತಿರುವ ಸಂಚುಗಳೇನು? ಎಂಬುದನ್ನು ಈವರೆಗೂ ರಾಜ್ಯದ ಜನತೆ ಕಾಂಗ್ರೇಸ್ ಸರ್ಕಾರ
ತಿಳಿಸಿರುವುದಿಲ್ಲ, ಆದುದರಿಂದ ಹಿಂದುಗಳ ದಾರ್ಮಿಕ ಶ್ರದ್ದಾ ಕೇಂದ್ರಗಳನ್ನು ಅವಮಾನಿಸುತ್ತಿರುವ ಸಮಾಜ
ವಿರೋಧಿ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅವರನ್ನು ಶಿಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ
ಪ್ರತಿಭಟನೆಯನ್ನು ಕೈಗೊಳ್ಳಲಾಗಿದೆ ಎಂದರು.

ಇನ್ನೂ ಬಿಜೆಪಿ ತಾಲೂಕು ಅಧ್ಯಕ್ಷ ಸುರೇಶ್ ಮಾತನಾಡಿ,
ಕರ್ನಾಟಕದ ಕಾಂಗ್ರೆಸ್ ಸರ್ಕಾರ ಹಿಂದುಗಳ ಭಕ್ತಿ ಭಾವನೆಗಳಿಗೆ
ಧಕ್ಕೆತರುವ ಹುನ್ನಾರವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ, ಇಂತಹ ದೃಷ್ಟ ಕೃತ್ಯವನ್ನು ತಡೆಯುವಲ್ಲಿ
ವಿಫಲವಾಗಿರುವ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ರಾಜ್ಯದ ಜನತೆಯ ಕ್ಷಮೆಯಾಚನೆ
ಮಾಡಬೇಕೆಂದು ಈ ಮೂಲಕ ಒತ್ತಾಯಿಸುತ್ತೇವೆ ಎಂದರು.

ಈ ಪ್ರತಿಭಟನೆಯಲ್ಲಿ ಚಿತ್ರದುರ್ಗ ಬಿಜೆಪಿ ಜಿಲ್ಲಾಧ್ಯಕ್ಷರಾದ ಕೆ ಟಿ ಕುಮಾರಸ್ವಾಮಿ, ಚಳ್ಳಕೆರೆ ತಾಲೂಕು ಮಂಡಲ ಅಧ್ಯಕ್ಷರಾದ ಬಿ ಎಂ ಸುರೇಶ್ , ಚಿತ್ರದುರ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಬಾಳೆಕಾಯಿ ರಾಮದಾಸ್, ಜಯಪಾಲಯ್ಯ, ಸೋಮಶೇಖರ್ ಮಂಡಿಮಠ ಶಿವಪುತ್ರಪ್ಪ, ಚಿತ್ರದುರ್ಗ ರೈತ ಮೋರ್ಚ ಜಿಲ್ಲಾಧ್ಯಕ್ಷರಾದ ವೆಂಕಟೇಶ್ ಯಾದವ್, ದೇವರಾಜ್ ರೆಡ್ಡಿ, ದಿನೇಶ್ ರೆಡ್ಡಿ , ಮಂಡಲ ಪ್ರಧಾನ ಪ್ರಧಾನ ಕಾರ್ಯದರ್ಶಿಗಳಾದ ಮೀರಾಸಾಬೀಹಳ್ಳಿ ಸುರೇಶ್, ಮತ್ತು ಓಬಳೇಶ್ ಈಶ್ವರ್ ನಾಯ್ಕ್ , ಜೆಕೆ ತಿಪ್ಪೇಸ್ವಾಮಿ, ಜಿಕೆ ವೀರಣ್ಣ ,ಮತ್ತು ವೀರೇಶ್, ಮಲ್ಲೆಶ್, ದಯಾನಂದ, ಮತ್ತು ಮುಂತಾದ ಮುಖಂಡರುಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

About The Author

Namma Challakere Local News
error: Content is protected !!