ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ನಗರದ ಕಾಟಪ್ಪನಹಟ್ಟಿ ಗೊಲ್ಲರಹಟ್ಟಿಯಲ್ಲಿ ನಡೆದ ಶ್ರೀಕೃಷ್ಣ ಜನ್ಮಾಷ್ಟಮಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮೆರವಣಿಗೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ರವಿಕುಮಾರ್, ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ನಗರಸಭೆ ಅಧ್ಯಕ್ಷರಾದ ಶ್ರೀಮತಿ ಶಿಲ್ಪ ಮುರಳೀಧರ್, ಸದಸ್ಯರುಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ, ಮುಖಂಡರಾದ ಮೂಡಲಗಿರಿಯಪ್ಪ, ಮಂಜುನಾಥ್, ವೀರೇಶ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

