ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲೂಕಿನ ಗೌರಸಮುದ್ರ ಗ್ರಾಮದಲ್ಲಿ ನಡೆದ ಶ್ರೀ ಮಾರಮ್ಮ ದೇವಿ ಜಾತ್ರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಗಳಾದ ರೇಹಾನ್ ಪಾಷಾ, ಡಿ.ವೈ.ಎಸ್.ಪಿ.ರಾಜಣ್ಣ, ನಗರಸಭೆ ಸದಸ್ಯರಾದ ರಮೇಶ್ ಗೌಡ, ರಾಘವೇಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ, ಮುಖಂಡರಾದ ರಘುನಾಥ ಗುಪ್ತ, ಸತ್ಯನಾರಾಯಣ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

