ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಕಲಿಕಾ ಸಾಮಾಗ್ರಿ ವಿತರಣೆ
ಚಳ್ಳಕೆರೆ: ತಾಲ್ಲೂಕಿನ ಬಂಜಿಗೆರೆ ಗ್ರಾಮದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ಪೆನ್ ಪೆನ್ಸಿಲ್ ವಿತರಣೆಯನ್ನು ಸರ್ವ ಪ್ರಯಾಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷರಾದ ಮಂಜುನಾಥರವರ ನೇತೃತ್ವದಲ್ಲಿ ಬಡ ಮಕ್ಕಳಿಗೆ ವಿತರಣೆ ಮಾಡಲಾಯಿತು.
ಸಾಮಾಜಿಕ ಸೇವ ರತ್ನ ರಾಜ್ಯಪ್ರಶಸ್ತಿ ಪುರಸ್ಕೃತರಾದ ಮಂಜುನಾಥ ಟಿ ಮಾತನಾಡಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಬಡ ಮಕ್ಕಳಿಗೆ ದೇವರು ಒಳ್ಳೆಯ ವಿದ್ಯಾಭ್ಯಾಸ ಆರೋಗ್ಯ ಐಶ್ವರ್ಯ ಕರುಣಿಸಿ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ನೀಡಲೆಂದು ಪ್ರಾರ್ಥಿಸುತ್ತೇನೆ ಸರ್ಕಾರಿ ಶಾಲಾ ಮಕ್ಕಳಿಗೆ ನೀಡಿರುವ ಉಚಿತ ನೋಟ್ ಬುಕ್ ಪೆನ್ ಪೆನ್ಸಿಲ್ ಇವುಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಿ. ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ದಾನಿಗಳು ನೆರವು ನೀಡಿದರೆ ಮಕ್ಕಳು ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯಸ್ಥರು ಶಾಲಾ ಶಿಕ್ಷಕರು ಸಹ ಶಿಕ್ಷಕರು, ವಿದ್ಯಾರ್ಥಿಗಳು ಗ್ರಾಮಸ್ಥರು ಪಾಲ್ಗೊಂಡಿದ್ದರು.

