ಚಳ್ಳಕೆರೆ :
ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿಯ ತುರುವನೂರು ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದ ಕಾರ್ಯಕ್ರಮದಲ್ಲಿ
ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಪಾಲ್ಗೊಂಡು ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಚಿತ್ರದುರ್ಗ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ತುರುವನೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ತುರುವನೂರು ಹೋಬಳಿ ಮಟ್ಟದ ಕ್ರೀಡಾಕೂಟದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ನಾಗವೇಣಮ್ಮ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬುರೆಡ್ಡಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಾಗರತ್ನಮ್ಮ, ತಾಲ್ಲೂಕು ಪ್ರಾಥಮಿಕ ಶಾಲೆಗಳ ಘಟದ ಅಧ್ಯಕ್ಷರಾದ ಕೆಂಚಪ್ಪ, ಮುಖಂಡರಾದ ರಾಮಕೃಷ್ಣ ರೆಡ್ಡಿ, ಸಂತೋಷ್, ಡಿ.ಆರ್.ಮಂಜುನಾಥ್, ರಾಜಣ್ಣ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಪೋಷಕರು, ಕ್ರೀಡಾಪಟುಗಳು ಉಪಸ್ಥಿತರಿದ್ದರು.

