ಚಳ್ಳಕೆರೆ : ಸರಕಾರದ ಕಾರ್ಯಕ್ರಮವಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಪರಿಕಲ್ಪನೆಯ ವಿನೂತನ ಕಾರ್ಯಕ್ರಮವನ್ನು ತಾಲೂಕಿನ ರಾಮಜೋಗಿಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಾಗಿದೆ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ವಹಿಸಲಿದ್ದಾರೆ,
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎನ್.ರಘುಮೂರ್ತಿ, ತಾಲೂಕು ಮಟ್ಟದ ವಿವಿಧ ಅಧಿಕಾರಿಗಳು ಪಾಲ್ಗೋತ್ತಾರೆ.
ಕಾರ್ಯಕ್ರಮದ ಮೊದಲು ಎತ್ತಿನ ಬಂಡಿಯಲ್ಲಿ ಕ್ಷೇತ್ರದ ಶಾಸಕರನ್ನು ಮೆರವಣೆಗೆ ಮೂಲಕ ಸ್ವಾಗತಿಸಿ ನಂತರ ಗ್ರಾಮದ ವಿವಿಧ ಬೀದಿಗಳಲ್ಲಿ ಸಂಚರಿಸಿ ನಂತರ ಸಭಾ ಕಾರ್ಯಕ್ರಮಕ್ಕೆ ಆಗಮಿಸುವರು ಎಂದು ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.