ನಾಯಕನಹಟ್ಟಿ; ನಾಯಕನಹಟ್ಟಿ ಪಟ್ಟಣದಲ್ಲಿ ಗುರುವಾರ ನಡೆದ ಹಿಂದೂ ಮಹಾಗಣಪತಿಯ ಬೃಹತ್ ಶೋಭಾಯಾತ್ರೆಯಲ್ಲಿ ಕೇಸರಿ ಧ್ವಜಾಗಳು ರಾರಾಜಿಸಿದವು.

ತೆರದ ವಾಹನದಲ್ಲಿ ಹಿಂದೂ‌ ಮಹಾಗಣಪತಿಯನ್ನು ಪ್ರತಿಷ್ಠಾಪನೆ ಮಾಡಿಕೊಂಡು ವಿವಿಧ ವಾದ್ಯಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.

ಹಿಂದೂ ಮಹಾಗಣಪತಿಯ ವಿಸರ್ಜನೆ ಮೆರವಣಿಗೆಯಲ್ಲಿ ಪಟ್ಟಣದ ಪಾದಗಟ್ಟೆ ಹತ್ತಿರ ಹಿಂದೂ ಮಹಾಗಣಪತಿಯನ್ನು ಪ್ರತಿಷ್ಠಾಪನೆ ಮಾಡಿದ 9 ಗಣಪತಿ ಮೂರ್ತಿಗಳನ್ನು ಟ್ರಾಕ್ಟರ್ ಗಳಲ್ಲಿ ಪ್ರತಿಷ್ಠಾಪನೆ ಮಾಡಿಕೊಂಡು ಸಾಮೂಹಿಕವಾಗಿ ಮೆರವಣಿಗೆ ನಡೆಸಿ, ನಾಯಕನಹಟ್ಟಿ ಚಿಕ್ಕಕೆರೆಯಲ್ಲಿ ಗಣಪತಿ ಮೂರ್ತಿಗಳನ್ನು ವಿಸರ್ಜನೆ ಮಾಡಿದರು‌.

ಇದೇ ಸಂದರ್ಭದಲ್ಲಿ ಹಿಂದೂ ಮಹಾ ಗಣಪತಿಯ ವ್ಯವಸಾಯಪಕರು ಯುವಕರು ಭಕ್ತಾದಿಗಳು ಹೋಬಳಿಯ ವಿವಿಧ ಹಳ್ಳಿಗಳ ಗ್ರಾಮಸ್ಥರು ಪೊಲೀಸ್ ಇಲಾಖೆಯ ತಳಕು ಮತ್ತು ನಾಯಕನಹಟ್ಟಿ ವೃತ ನಿರೀಕ್ಷಕ ಹನುಮಂತಪ್ಪ ಎಂ. ಶೀರೇಹಳ್ಳಿ ಪಿಎಸ್ಐ ಪಾಂಡುರಂಗಪ್ಪ, ಮೊಳಕಾಲ್ಮೂರು ಪೊಲೀಸ್ ಠಾಣೆ ಪಿಎಸ್ಐ ಮಹೇಶ್ ಲಕ್ಷ್ಮಣ್ ಹೊಸಪೇಟೆ, ಸೇರಿದಂತೆ ಸಿಬ್ಬಂದಿಗಳು ಇದ್ದರು

About The Author

Namma Challakere Local News
error: Content is protected !!