ಚಳ್ಳಕೆರೆ :
ಚಿತ್ರದುರ್ಗ: ಅತಿಥಿ ಉಪನ್ಯಾಸಕರ ನೇಮಕಕ್ಕಾಗಿ
ಪ್ರತಿಭಟನೆ
ಚಿತ್ರದುರ್ಗದಲ್ಲಿಂದು ಎಐಡಿಎಸ್‌ಒ ಸಂಘಟನೆಯಿಂದ ಓಬವ್ವ
ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ
ಗೊಂದಲ ನಿವಾರಣೆಗೆ ಆಗ್ರಹಿಸಿ ಡಿಸಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು
ಕಳೆದರೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕೊರತೆ
ಎದುರಾಗಿದೆ. ಬಹುತೇಕ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ
ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು, ತರಗತಿಗಳು
ಸರಿಯಾಗಿ ನಡೆಯದೆ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ ಎಂದು
ಪ್ರತಿಭಟನಾಕಾರರು ತಿಳಿಸಿದರು.

