ಕೆ ಸಿ ವೀರೇಂದ್ರ ಪಪ್ಪಿಯ ವಿವಿಧ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿದ ಇಡಿ ಅಧಿಕಾರಿಗಳು….

ಚಿತ್ರದುರ್ಗ ಶಾಸಕ ಕೈ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಯನ್ನು ಈಗಾಗಲೇ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿರುವ ಇಡಿ ಅಧಿಕಾರಿಗಳು ಚಳ್ಳಕೆರೆ ನಗರದಲ್ಲಿ ಇಂದು ಸಹ ದಾಳಿ ನಡಸಿ ವಿವಿಧ ಬ್ಯಾಂಕ್ ಖಾತೆಗಳನ್ನು ಪರಿಶೀಲನೆ ನಡೆಸಿದ್ದಾರೆ…

ಆನ್‌ಲೈನ್‌ ಬೆಟ್ಟಿಂಗ್‌ ಆಪ್‌, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಶಾಸಕ ಕೆ.ಸಿ ವೀರೇಂದ್ರ ಪಪ್ಪಿಯನ್ನು ಬಂಧಿಸಿ, ತೀವ್ರ ವಿಚಾರಣೆ ಮಾಡುತ್ತಿದ್ದು ಇಂದು ಸಹ ಚಳ್ಳಕೆರೆ ನಗರಕ್ಕೆ ಆಗಮಿಸಿ, ವಿವಿಧ ಬ್ಯಾಂಕ್ ಗಳಿಗೆ ತೆರಳಿ ಸಂಬಂಧಪಟ್ಟ ಖಾತೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ..

ಚಳ್ಳಕೆರೆ ಫೆಡರಲ್ ಬ್ಯಾಂಕ್ ,ವೀರಶೈವ ಸಹಕಾರಿ ಬ್ಯಾಂಕ್‌, ಕೋಟೆಕ್‌ ಮಹೀಂದ್ರಾ ಬ್ಯಾಂಕ್‌ನಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ವಿಚಾರಣೆ ವೇಳೆ ಸಿಕ್ಕ ಮಾಹಿತಿ ಆಧರಿಸಿ ಇಡಿ ಅಧಿಕಾರಿಗಳು ಮತ್ತೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ…

About The Author

Namma Challakere Local News
error: Content is protected !!