ಚಳ್ಳಕೆರೆ :
ಮೊಳಕಾಲ್ಕೂರು: ಅಪರಿಚಿತ ವಾಹನ ಡಿಕ್ಕಿ ನಾಲ್ಕು
ವರ್ಷದ ಕರಡಿ ಸಾವು
ಮೊಳಕಾಲ್ಮುರು ಸಮೀಪದ ರಾಷ್ಟ್ರೀಯ ಹೆದ್ದಾರಿ 150 ಎ
ಹಾನಗಲ್ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ
ಪರಿಣಾಮ ನಾಲ್ಕು ವರ್ಷದ ಕರಡಿ ರಸ್ತೆಯಲ್ಲಿ ಬಿದ್ದು ಮೃತಪಟ್ಟಿದೆ.
ಘಟನೆಯ ನಂತರ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ
ನಡೆಸಿದ್ದು, ಮೊಳಕಾಲ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ
ದಾಖಲಾಗಿದೆ.

