ಚಳ್ಳಕೆರೆ : ಹೊಳಲ್ಕೆರೆ: ಡಿಸಿ ಕಚೇರಿಗೆ ಬೀಗ ಹಾಕುವ ಎಚ್ಚರಿಕೆ
ನೀಡಿದ ರೈತ ಮಹಿಳಾ
ಚಿತ್ರದುರ್ಗ ಜಿಲ್ಲೆಯಲ್ಲಿ ಈರುಳ್ಳಿ ಮತ್ತು ಶೇಂಗಾ ಬೆಳೆಗೆ
ಸಂಬಂಧಿಸಿದಂತೆ ಅಧಿಕಾರಿಗಳು ತಮ್ಮ ಬೇಡಿಕೆಗಳನ್ನು
ಈಡೇರಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಬೀಗ ಹಾಕುವುದಾಗಿ
ಹೊಳಲ್ಕೆರೆ ಕ್ಷೇತ್ರದ ಚಿಕ್ಕಬೆನ್ನೂರಿನ ರೈತ ಮಹಿಳೆ ಶಾಂತಮ್ಮ
ಇಂದು ಎಚ್ಚರಿಕೆ ನೀಡಿದ್ದಾರೆ. ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ
ಬಳಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕೋಟಿ
ಕೋಟಿ ಹಣ ಲೂಟಿ ಹೊಡೆಯುವ ಅಧಿಕಾರಿಗಳಿಗೆ ರೈತರ ಸಮಸ್ಯೆ
ಅರ್ಥವಾಗುವುದಿಲ್ಲ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

About The Author

Namma Challakere Local News
error: Content is protected !!