ಚಳ್ಳಕೆರೆ :LJ
ಚಳ್ಳಕೆರೆ: ಜೂಜು ಅಡ್ಡೆ ಮೇಲೆ ದಾಳಿ ನಾಲ್ವರ ಬಂಧನ
ಚಳ್ಳಕೆರೆಯ ಹೆಗ್ಗೆರೆ ಗ್ರಾಮದ ಹನುಮಂತರಾಯ ದೇವಸ್ಥಾನದ ಬಳಿ
ಅಕ್ರಮ ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ
ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು,
ಅವರಿಂದ 74,210 ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ.
ಸಾರ್ವಜನಿಕರಿಂದ ದೊರೆತ ಖಚಿತ ಮಾಹಿತಿ ಆಧರಿಸಿ ಇನ್ಸಪೆಕ್ಟರ್
ಕುಮಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದರು. ಬಂಧಿತ
ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ,
ಜೂಜಾಟದ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ
ಮೂಡಿಸಲಾಯಿತು.

About The Author

Namma Challakere Local News
error: Content is protected !!