ನಗರದ ಶಾಸಕರ ಭವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ರವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜೀ ರವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಗಾಂಧಿ ಹಾಕಿಕೊಟ್ಟ ದಾರಿಯಲ್ಲಿ ನಡೆಯುವ ಶಕ್ತಿ ದೊರೆಯಲೆಂದು ಪ್ರಾರ್ಥಿಸುತ್ತೇನೆ. ಈ ಸಂದರ್ಭದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನೂ ನೆನೆಯುತ್ತೇನೆ. ಅವರು ಅತ್ಯಂತ ಪ್ರಾಮಾಣಿಕವಾದ ವ್ಯಕ್ತಿ. ಗಾಂಧಿ ಜಯಂತಿಯಂದೇ ವಿಜಯದಶಮಿ ಮೆರವಣಿಗೆಯೂ ನಡೆಯುತ್ತಿದೆ. ಹೀಗಾಗಿ, ನಾಡಿನ ಎಲ್ಲ ಜನರಿಗೆ ವಿಜಯದಶಮಿಯ ಶುಭಾಶಯಗಳನ್ನು ಕೋರುತ್ತೇನೆ ಎಂದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಶಿಲ್ಪ ಮುರಳೀಧರ್, ಉಪಾಧ್ಯಕ್ಷರಾದ ಕವಿತಾ ವೀರೇಶ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ್, ಸದಸ್ಯರಾದ ರಮೇಶ್ ಗೌಡ, ಚಳ್ಳಕೆರೆಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಶಶಿಧರ, ಹಿರಿಯ ಮುಖಂಡರಾದ ಪ್ರಭುದೇವ್, ತಾಲೂಕು ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ತಾಲ್ಲೂಕು ಪಂಚಾಯತ್ ಕೆಡಿಪಿ ನಾಮ ನಿರ್ದೇಶನ ಸದಸ್ಯರಾದ ರಮೇಶ್, ಜಿಲ್ಲಾ ಪಂಚಾಯತ್ ಕೆಡಿಪಿ ನಾಮ ನಿರ್ದೇಶನ ಸದಸ್ಯರಾದ ರಂಗಸ್ವಾಮಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ್, ಉಪಾಧ್ಯಕ್ಷರಾದ ಪ್ರದೀಪ್, ಮಾಜಿ ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ವೀರೇಶ್, ಸದಸ್ಯರಾದ ಸಿಟಿ ಶ್ರೀನಿವಾಸ, ಜಿಲ್ಲಾ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾದ ಪ್ರಕಾಶ್, ಸೇವಾದಳ ಅಧ್ಯಕ್ಷರಾದ ತಿಪ್ಪೇಸ್ವಾಮಿ, ಮುಖಂಡರಾದ ಸೈಯದ್, ಭರಮಣ್ಣ, ಬೋರಣ್ಣ, ಮಂಜುನಾಥ್, ಭಾಷೀರ ಅಹಮ್ಮದ್, ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

