ಚಳ್ಳಕೆರೆ : ಶ್ರೀ ರಾಮಾಯಣ ಕಾವ್ಯದ ಅಂಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ನಮ್ಮ ಬದುಕಿಗೆ ಸಾರ್ಥಕತೆ ಸಿಗುತ್ತದೆ ಶಾಸಕ ಟಿ.ರಘುಮೂರ್ತಿ ಹೇಳಿದರು.

ಅವರು ನಗರದ ಬೆಂಗಳೂರು ರಸ್ತೆಯಲ್ಲಿ ಇರುವ ವಾಲ್ಮೀಕಿ ಸಮುದಾಯ ಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಆಯೋಜಿಸಿದ್ದ ಶ್ರೀ ವಾಲ್ಮೀಕಿ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದರು, ಮಹಾನೀಯರು ನಾಡಿಗೆ ನೀಡಿದಂತಹ ಸಂದೇಶಗಳು ಸರ್ವಕಾಲಕ್ಕೂ ಶ್ರೇಷ್ಠವಾದಂತವು. ಇಂತಹ ಸಂದೇಶಗಳನ್ನು ನಾವು ಸಕಾರಗೊಳಿಸಬೇಕಾದ ಅನಿವಾರ್ಯತೆ ಇದೆ, ನಮ್ಮ ಪರಂಪರೆ, ನಮ್ಮ ಸಂಸ್ಕೃತಿ, ಇತಿಹಾಸದ, ವೈಭವವನ್ನು ಸಾರುವುದು ಇಂತಹ ಮಹಾನೀಯರಿಂದ ಮಾತ್ರ ,ಎಂದರು.

ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಗಳಾದ ರೇಹಾನ್ ಪಾಷಾ, ಪೌರಾಯುಕ್ತ ರಾದ ಜಗ್ಗಾರೆಡ್ಡಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗಳಾದ ಶಶಿಧರ, ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಶಿವರಾಜ್, ಸಿಡಿಪಿಓ ರಾಜುನಾಯ್ಕ್, ಬಿಸಿಎಂ ಅಧಿಕಾರಿ ರಮೇಶ್, ನಗರಸಭೆ ಅಧ್ಯಕ್ಷರಾದ ಶಿಲ್ಪ ಮುರಳೀಧರ್, ಉಪಾಧ್ಯಕ್ಷರಾದ ಕವಿತಾ ವೀರೇಶ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ್, ಸದಸ್ಯರುಗಳು, ತಾಲ್ಲೂಕು ಪಂಚಾಯತ್ ಕೆಡಿಪಿ ನಾಮ ನಿರ್ದೇಶನ ಸದಸ್ಯರಾದ ಸುರೇಶ್ ಕುಮಾರ್, ರಮೇಶ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರಕಾಶ್ ಮೂರ್ತಿ, ಮುಖಂಡರುಗಳಾದ ಕೃಷ್ಣಮೂರ್ತಿ, ಪ್ರಹ್ಲಾದ್, ಬೋರಣ್ಣ, ಗಿರಿಯಪ್ಪ, ಮೂಡಲಗಿರಿಯಪ್ಪ, ನಟರಾಜ್, ಮಂಜುನಾಥ, ಗೋವಿಂದರಾಜು, ಜೆಡಿಎಸ್ ತಾಲ್ಲೂಕು ಅಧ್ಯಕ್ಷರಾದ ಪಿ.ತಿಪ್ಪೇಸ್ವಾಮಿ, ಬಿಜೆಪಿ ಮುಖಂಡರಾದ ರಾಮದಾಸ್, ಜಯಪಾಲಯ್ಯ, ಪಾಲಯ್ಯ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ನಾಯಕ ಸಮುದಾಯದವರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!