ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಾಧೀಶ, ಜಸ್ಟೀಸ್ ಗವಾಯಿ ಯವರ ಮೇಲೆ ಚಪ್ಪಲಿ ಎಸೆದಿರುವ ಖಂಡನಿಯ! ————————————.
ಚಳ್ಳಕೆರೆ -09 ಸುಪ್ರೀಂ ಕೋರ್ಟಿನ ಮುಖ್ಯ ನ್ಯಾ ಯಧೀಶ ಜಸ್ಟೀಸ್ ಬಿ. ಆರ್. ಗವಾಯಿ ಅವರ ಮೇಲೆ ತೆರೆದ ನ್ಯಾಯಾಲಯದ ಕೋಣೆಯಲ್ಲಿ ಚಪ್ಪಲಿ ಎಸೆಯಲಾಗಿದ್ದು, ಸನಾತನ ಧರ್ಮವನ್ನು ಬೆಂಬಲಿಸುವ ಘೋಷಣೆಗಳನ್ನು ಕೂಗಲಾಗಿದೆ ಭಾರತದ ಮುಖ್ಯ ನ್ಯಾಯಮೂರ್ತಿ, ದಲಿತನಾದ ಬಿ. ಆರ್. ಗವಾಯಿ ಅವರ ಮೇಲೆ ಚಪ್ಪಲಿ ಎಸೆದ ಕೃತ್ಯವನ್ನು ಚಳ್ಳಕೆರೆ ಕಾರ್ಮಿಕ ಸಂಘಟನೆಗಳು ಬಲವಾಗಿ ಖಂಡಿಸಲಾಗಿದೆ. ಅತ್ಯಂತ ಅಘಾತಕಾರಿ ಮತ್ತು ಶೋಚನಿಯ, ಜಾತಿವಾದಿ, ಮನುವಾದಿ ಮತ್ತು ಕೋಮುವಾದಿ ವಿಚಾರಗಳನ್ನು ಉತ್ತೇಜಿಸುವ ಬಿಜೆಪಿ ಮುಖ್ಯಮಂತ್ರಿಗಳು, ಸಚಿವರು ಮತ್ತು ನಾಯಕರ ಇತ್ತೀಚಿನ ಹೇಳಿಕೆಗಳು ಅಂತಹ ಕೃತ್ಯಗಳಿಗೆ ಧೈರ್ಯ ತುಂಬಿವೆ. ಈ ಘಟನೆಯು ಹಿಂದುತ್ವ ಕೋಮುವಾದಿ ಶಕ್ತಿಗಳು ಸಮಾಜದೊಳಕ್ಕೆ ಮನುವಾದಿ ಮತ್ತು ಕೋಮು ವಿಷವನ್ನು ಚುಚ್ಚುತ್ತಿರುವುದಕ್ಕೆ ಮತ್ತೊಂದು ಉದಾರಣೆಯಾಗಿದೆ. ಇದು ಸಂಘ ಪರಿವಾರದ ಅಸಹಿಷ್ಣುತೆ ಮತ್ತು ತಮ್ಮ ಸಿದ್ಧಾಂತಕ್ಕೆ ಹೊಂದಿಕೆಯಾಗದ ಯಾವುದೇ ಅಭಿಪ್ರಾಯವನ್ನು ಸ್ವೀಕರಿಸಲು ಸಿದ್ದವಿಲ್ಲದಿರುವುದನ್ನು ಬಿಂಬಿಸುತ್ತದೆ. ಇದು ನ್ಯಾಯಾಂಗಕ್ಕೆ ಮಾಡುವ ಅಪಮಾನವಾಗಿದೆ. ದಲಿತ ಸಮುದಾಯದ ಸರ್ವೋಚ್ಚ ನ್ಯಾಯಾಲಯದ ಬಿ. ಆರ್. ಗವಾಯಿ ಅವರಿಗೆ ಕೇಂದ್ರ ಸರ್ಕಾರವು ಸಾಕಷ್ಟು ರಕ್ಷಣೆ ನೀಡಬೇಕು. ಸರ್ಕಾರವು ಅಸಹಿಷ್ಣುತೆಯನ್ನು ಹರಡುವ ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ಧ ದೃಢ ಕ್ರಮಗಳನ್ನು ಕೈಗೊಳ್ಳಬೇಕು, ಅದೇ ಸಮಯದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಭಿನ್ನಮತ ವ್ಯಕ್ತಪಡುಸುವ ಹಕ್ಕನ್ನು ರಕ್ಷಿಸಬೇಕು ಎಂದು ಕಾರ್ಮಿಕ ಮುಖಂಡ ಟಿ. ತಿಪ್ಪೇಸ್ವಾಮಿ ವ್ಯಕ್ತ ಪಡಿಸಿದರು. ಸರ್ವೋಚ್ಚ ನ್ಯಾಯಾಲಯದ ಬಾರ್ ಅಸೋಸಿಯೇಷನ್ ನಲ್ಲಿ ನೋಂದಾಯಿಸಿಕೊಡಿರುವ ವಕೀಲರಾಗಿರುವ ವಕೀಲರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು. ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ನಲ್ಲಿ ನೋಂದಾಯಿಸಿಕೊಂಡಿರುವ ಆರೋಪಿ ವಕೀಲನ ಸದಸ್ಯತ್ವನ್ನು ಈ ಕೂಡಲೇ ರದ್ದು ಗೊಳಿಸಬೇಕು. ಸುಪ್ರೀಂ ಕೋರ್ಟ್ ನಲ್ಲಿ ಬಿ. ಆರ್. ಗವಾಯಿ ಅವರ ಮೇಲೆ ದುರುದ್ದೇಶಪೂರ್ವಕವಾಗಿ ಅವಮಾನಗೈದು ಗೂಂಡಾಗಿರಿಯ ವಿಕೃತಿ ಮೆರೆದ ಆರೋಪಿಯ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಟಿ ತಿಪ್ಪೇಸ್ವಾಮಿ
ಸಿಐಟಿಯು
ಚಳ್ಳಕೆರೆ ಇವರು
ಒತ್ತಾಯಿಸಿದರು.

