ಸಂಸ್ಕೃತದ ಆದಿ ಕಾವ್ಯವನ್ನು ರಚಿಸಿದವರು ಮಹರ್ಷಿ ವಾಲ್ಮೀಕಿ:-ಶ್ರೀಮತಿ ಎಚ್ ಲಕ್ಷ್ಮೀದೇವಮ್ಮ. ಚಳ್ಳಕೆರೆ:-ಸಂಸ್ಕೃತದ ಆದಿಕಾವ್ಯವಾದ ಶ್ರೀಮದ್ ರಾಮಾಯಣವನ್ನು ರಚಿಸಿದವರು ಮಹರ್ಷಿ ವಾಲ್ಮೀಕಿ ಮುನಿಗಳು ಎಂದು ಚಳ್ಳಕೆರೆಯ ತ್ಯಾಗರಾಜನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಎಚ್ ಲಕ್ಷ್ಮೀದೇವಮ್ಮ ತಿಳಿಸಿದರು. ತ್ಯಾಗರಾಜನಗರದ ಸದ್ಭಕ್ತರಾದ ಶ್ರೀಮತಿ ನಂಜಮ್ಮ ಕೆಂಚಪ್ಪ ಶಿಕ್ಷಕರ ಸವಿತಾ ನಿವಾಸದಲ್ಲಿ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದಿಂದ “ವಾಲ್ಮೀಕಿ ಮಹರ್ಷಿಗಳ” ಜಯಂತಿಯ ಪ್ರಯುಕ್ತ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು “ವಾಲ್ಮೀಕಿ ಮಹರ್ಷಿಗಳ” ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಈ ಸತ್ಸಂಗದ ಪ್ರಯುಕ್ತ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ ಶ್ರೀರಾಮರಕ್ಷಾ ಸ್ತೋತ್ರ ಪಠಣ , ಶ್ರೀರಾಮಕೃಷ್ಣರ ನಾಮಸ್ಮರಣೆ, ಶ್ರೀಮತಿ ಎಂ ಗೀತಾ ನಾಗರಾಜ್, ರತ್ನಮ್ಮ,ತಿಪ್ಪಮ್ಮ ಉಮಾಶಂಕರ್, ಮೋಹಿನಿ ಸತ್ಯನಾರಾಯಣ ಅವರಿಂದ ವಿಶೇಷ ಭಜನೆ ಹಾಗೂ “ಶ್ರೀಶಾರದಾದೇವಿ ಜೀವನಗಂಗಾ” ಗ್ರಂಥ ಪಾರಾಯಣ ಕಾರ್ಯಕ್ರಮವನ್ನು ಯತೀಶ್ ಎಂ ಸಿದ್ದಾಪುರ ನಡೆಸಿಕೊಟ್ಟರು. ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ನಂಜಮ್ಮ ಕೆಂಚಪ್ಪ , ಅನುಸೂಯ ರಾಘವೇಂದ್ರ , ಬಿ.ಎಂ.ಗೀತಾ ಸುಂದರೇಶ್ ದೀಕ್ಷಿತ್, ಎಂ ಲಕ್ಷ್ಮೀದೇವಮ್ಮ , ಸರ್ವಮಂಗಳ ಶಿವಣ್ಣ,ಪ್ರೇಮಾ ಪಾಲ್ಗೊಂಡಿದ್ದರು.

